ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ
Karnataka Weather: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇಂದು ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ, ಅಲ್ಲಲ್ಲಿ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು ಭಾಗದಲ್ಲಿ ಮಳೆಯ ಚಟುವಟಿಕೆ ಕಡಿಮೆಯಿರುವ ನಿರೀಕ್ಷೆಯಿದ್ದು, ಬಿಸಿಲು ಹಾಗೂ ಸೆಕೆಯ ವಾತಾವರಣ ಮುಂದುವರಿಯಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸುವ ನಿರೀಕ್ಷೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ಆಕಾಶದೊಂದಿಗೆ ಸಾಧಾರಣ ಮಳೆಯಾಗಲಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 31 ಮತ್ತು ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಂಭವವಿದೆ.
ರಾಯಚೂರು ಹಾಗೂ ವಿಜಯಪುರ ಜಿಲ್ಲೆಯಲ್ಲಿ ಭಾಗಶಃ ಭಾಗಶಃ ಮೋಡ ಕವಿದ ಆಕಾಶವಿರಲಿದೆ.