Karnataka Weather: ರಾಜ್ಯದಲ್ಲಿ ಒಣಹವೆ ಮುಂದುವರಿಕೆ
Karnataka Weather: ರಾಜ್ಯದಾದ್ಯಂತ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದಾದ್ಯಂತ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಮುಂಜಾನೆ ಚಳಿ ಮತ್ತು ಅಲ್ಲಲ್ಲಿ ಮಂಜಿನ ವಾತಾವರಣವಿರುವ ನಿರೀಕ್ಷೆಯಿದೆ. ಮಳೆಯ ಚಟುವಟಿಕೆ ಕಡಿಮೆಯಿರುವ ಸಂಭವವಿದ್ದು, ಬಿಸಿಲು ಹಾಗೂ ಸೆಕೆಯ ವಾತಾವರಣ ಮುಂದುವರಿಯಲಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 28 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ಆಕಾಶವಿರಲಿದೆ.
ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 32 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಸಾಮಾನ್ಯ ಮೋಡ ಕವಿದ ವಾತಾವರಣವು ಮುಂದುವರಿಲಿದೆ.
ಹಾಸನದಲ್ಲಿ ಗರಿಷ್ಠ 26 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ಆಕಾಶದೊಂದಿಗೆ, ಹಗುರ ಮಳೆ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ರಾಯಚೂರು, ವಿಜಯಪುರ ಹಾಗೂ ಕಲಬುರಗಿಯಲ್ಲಿ ಭಾಗಶಃ ಮೋಡ ಕವಿದ ಆಕಾಶವಿರಲಿದೆ.