ರಾಜ್ಯದಲ್ಲಿ ಮೋಡ ಕವಿದ ವಾತಾವರಣ.. ಅಲ್ಲಲ್ಲಿ ಹಗುರ ಮಳೆ

Karnataka Weather: ಕಲ್ಯಾಣ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದ ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

Oct 28, 2026 - 10:42
ರಾಜ್ಯದಲ್ಲಿ ಮೋಡ ಕವಿದ ವಾತಾವರಣ.. ಅಲ್ಲಲ್ಲಿ ಹಗುರ ಮಳೆ

ಬೆಂಗಳೂರು: ಅರ್ನಬ್‌ ಚಂಡಮಾರುತ ಪ್ರಭಾವದಿಂದ ಕಲ್ಯಾಣ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದ ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಒಳನಾಡು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಗರಿಷ್ಠ ಉಷ್ಣಾಂಶ ವಾಡಿಕೆಗಿಂತ ಹೆಚ್ಚಾಗುವ ಸಂಭವವಿದೆ.  

ಉಳಿದ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಯ ಮಟ್ಟದಲ್ಲಿರಲಿದೆ.. ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ-ಬೆಳಗಿನ ವೇಳೆಯಲ್ಲಿ ಚಳಿ ಹಾಗೂ ಮಂಜು ಆವರಿಸುವ ಸಾಧ್ಯತೆ ಇದೆ. 

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. 

ಕರಾವಳಿ ನಗರಿ ಮಂಗಳೂರಿನಲ್ಲಿ ಗರಿಷ್ಠ 34 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಬಹುತೇಕ ಮೋಡ ಕವಿದ ಆಕಾಶವು ಇರಲಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.