ಕಾವು ನವೋದಯ ಒಕ್ಕೂಟದಿಂದ ಮಕ್ಕಳಿಗೆ ಪುಸ್ತಕ-ಲೇಖನ ಸಾಮಗ್ರಿ & ಪ್ರೋತ್ಸಾಹ ಧನ ವಿತರಣೆ
Kavu Navodaya Union: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ, ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಲೇಖನ ಸಾಮಗ್ರಿ ವಿತರಣೆ ಹಾಗೂ ಎಸ್‍ಎಸ್‍ಎಲ್‍ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಈಚೆಗೆ ನಡೆಯಿತು.
ಪುತ್ತೂರು (ಕಾವು): ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ, ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಲೇಖನ ಸಾಮಗ್ರಿ ವಿತರಣೆ ಹಾಗೂ ಎಸ್‍ಎಸ್‍ಎಲ್‍ಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಈಚೆಗೆ ನಡೆಯಿತು.
ಮಂಗಳೂರಿನ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮತ್ತು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ, ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಒಕ್ಕೂಟದ ಸದಸ್ಯರ 95 ಮಕ್ಕಳಿಗೆ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಯಿತು. ಜೊತೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ 4 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ, ಗೌರವಿಸಲಾಯಿತು.
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ್ತ ಮೂಡೆತ್ತಾಯ, ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆ ಬಳಿಕ ಮಾತನಾಡಿ, 'ಒಂದು ನಿಯಮವನ್ನು ಎಲ್ಲರೂ ಶಿಸ್ತುಬದ್ಧವಾಗಿ ಪಾಲಿಸಿದಾಗ ಮಾತ್ರ, ವ್ಯಕ್ತಿಯಾಗಲಿ ಅಥವಾ ಸಂಘಟನೆಯಾಗಲಿ ಉನ್ನತಿಗೆ ಏರಲು ಸಾಧ್ಯವಾಗುತ್ತದೆ. ಕಳೆದ 10 ವರ್ಷಗಳಿಂದ ಸೇವಾ ಕಾರ್ಯಗಳನ್ನು ಒಕ್ಕೂಟವು ಅಚ್ಚುಕಟ್ಟಾಗಿ ನಡೆಸಿಕೊಂಡು ಬರುತ್ತಿದ್ದು, ಎಲ್ಲರಿಗೂ ಮಾದರಿಯಾಗಿವೆ' ಎಂದು ಹೇಳಿದರು.
ಸಿಎ ಬ್ಯಾಂಕಿನ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೇಶವ ಮೂರ್ತಿ, ಟ್ರಸ್ಟ್‌ನ ಮೇಲ್ವಿಚಾರಕ ಹರೀಶ್ ಕುಲಾಲ್, ಒಕ್ಕೂಟದ ಅಧ್ಯಕ್ಷ ಸುಬ್ರಾಯ ಗೌಡ, ಗೌರವಾಧ್ಯಕ್ಷ ಅಮ್ಮುಪೂಂಜಾ, ಕಾವು ವಲಯ ಪ್ರೇರಕ ಗಾಯತ್ರಿ, ನೂತನ ಒಕ್ಕೂಟದ ಕಾರ್ಯದರ್ಶಿ ರೇವತಿ ಸಿ.ಎನ್ ಹಾಗೂ ಕಾರ್ಯದರ್ಶಿ ಮೀನಾಕ್ಷಿ ಎಂ ಉಪಸ್ಥಿತರಿದ್ದರು.
ರೇವತಿ ಸಿ.ಎನ್ ಪ್ರಾರ್ಥನೆ ಮಾಡಿದರು. ಒಕ್ಕೂಟದ ಅಧ್ಯಕ್ಷ ಸುಬ್ರಾಯ ಗೌಡ ಸ್ವಾಗತಿಸಿದರು. ಗೌರವಾಧ್ಯಕ್ಷ ಅಮ್ಮುಪೂಂಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಮೀನಾಕ್ಷಿ ಎಂ ಒಕ್ಕೂಟದ ವರದಿ ಓದಿದರು.
ಶ್ರೀ ಪಂಚಲಿಂಗೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕ ಶ್ರೇಯಸ್ ಸಿ.ಎನ್ ಧನ್ಯವಾದ ಅರ್ಪಿಸಿದರು. ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಚಿದಾನಂದ ಆಚಾರ್ಯ ಕಾರ್ಯಕ್ರಮವನ್ನು ನಿರ್ವಹಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.