CAR/ DAR: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ.. ತಾತ್ಕಾಲಿಕ ಫಲಿತಾಂಶ ಪ್ರಕಟ

CAR/ DAR: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸೆ.6 ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಪ್ರಕಟಿಸಿದೆ.

Sep 11, 2026 - 16:45
CAR/ DAR: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ.. ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) ಹುದ್ದೆಗಳಿಗೆ ಸೆ.6 ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು  ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. ಈ ಬಗ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.

ದಾಖಲೆ ಅವಧಿ ಅಂದರೆ, ಪರೀಕ್ಷೆ ನಡೆದು ಕೇವಲ ಐದು ದಿನಗಳಲ್ಲಿಯೇ ಫಲಿತಾಂಶವನ್ನು ಘೋಷಿಸಿದೆ. 

ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದರೆ, ಸೆ.14 ರಂದು ಸಂಜೆ‌ 5.30ರೊಳಗೆ ನಿಗದಿತ ಲಿಂಕ್ (https://cetonline.Karnataka.in/kea/) ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಹೇಳಿದೆ.

ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಸೆ.10 ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿತ್ತು. ಒಟ್ಟು 1,600 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿತ್ತು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.