KEA: 1,531 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

KEA: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಒಟ್ಟು 1,531 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇತ್ತೀಚೆಗೆ ಅಧಿಸೂಚನೆ ಹೊರಡಿಸಿದೆ.

Nov 21, 2026 - 14:59
Nov 21, 2026 - 15:00
KEA: 1,531 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಅಗ್ನಿಶಾಮಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಒಟ್ಟು 1,531 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇತ್ತೀಚೆಗೆ ಅಧಿಸೂಚನೆ ಹೊರಡಿಸಿದೆ. 

ಅರ್ಹ ಅಭ್ಯರ್ಥಿಗಳು, ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ 1,311 ಮತ್ತು ಕಲ್ಯಾಣ ಕರ್ನಾಟಕ ವೃಂದದ 220 ಹುದ್ದೆಗಳು ಸೇರಿವೆ. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ 171 ಮಹಿಳಾ ಮೇಲ್ವಿಚಾರಕಿ ಹುದ್ದೆಗೂ ಅರ್ಜಿ ಆಹ್ವಾನಿಸಲಾಗಿದೆ. 

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 35 ಕೈಗಾರಿಕಾ ವಿಸ್ತರಣಾಧಿಕಾರಿ, ಸರ್ಕಾರಿ ಅಭಿಯೋಜಕರು ಕಮ್ ಸಹಾಯಕ ಸರ್ಕಾರಿ ವಕೀಲರು 320, ರೇಷ್ಮೆ ನಿರೀಕ್ಷಕರು 34, ಮಾರುಕಟ್ಟೆ ಮೇಲ್ವಿಚಾರಕರು 4, ಜವಳಿ ನಿರೀಕ್ಷಕರು 27, ಅರಣ್ಯ ರಕ್ಷಕರು 450, ಅಗ್ನಿಶಾಮಕ ಅಧಿಕಾರಿ 20 ಹಾಗೂ ಅಗ್ನಿಶಾಮಕ ಸಿಬ್ಬಂದಿ 470 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಹುದ್ದೆಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಿಗೆ, ಹತ್ತನೇ ತರಗತಿಯಲ್ಲಿ ಅಭ್ಯರ್ಥಿ ಗಳಿಸಿದ ಅಂಕಗಳ ಆಧಾರ ಮೇಲೆ ನೇಮಕಾತಿಗೆ ಅರ್ಹರನ್ನಾಗಿಸಲಾಗುತ್ತದೆ.

ಈ ಎಲ್ಲಾ ಪರೀಕ್ಷೆಗಳಿಗೂ ಫೆಬ್ರುವರಿ-ಮಾರ್ಚ್ ತಿಂಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ನಿಖರವಾದ ದಿನಾಂಕಗಳನ್ನು ನಂತರ ತಿಳಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ. 

ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/indexnewಗೆ ಸಂಪರ್ಕಿಸಬಹುದು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.