ಕೆಇಎ: 814 ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ, ಡಿ.25 ಕಡೆ ದಿನ

KEA: ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ನೇಮಕಾತಿಗೆ ಕೆಇಎ ಅಧಿಸೂಚನೆ ಹೊರಡಿಸಿದೆ.

Nov 27, 2026 - 13:20
Nov 27, 2026 - 13:21
ಕೆಇಎ: 814 ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ, ಡಿ.25 ಕಡೆ ದಿನ

ಬೆಂಗಳೂರು: ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ.

ಈಗಾಗಲೇ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಶುರುವಾಗಿದೆ. ಡಿ.25 ಅರ್ಜಿ ಸಲ್ಲಿಸಲು ಕಡೆ ದಿನವಾಗಿದೆ. ಡಿ.26 ಶುಲ್ಕ ಪಾವತಿಸಲು ಕೊನೆ ದಿನಾಂಕವಾಗಿದೆ.

ಉಳಿಕೆ‌ ಮೂಲ ವೃಂದದಲ್ಲಿ 778 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 36 ಹುದ್ದೆಗಳನ್ನು ತುಂಬಲಾಗುತ್ತದೆ. ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಬಿಇಡಿ ಪೂರೈಸಿರುವವರೂ ಅರ್ಜಿ ಸಲ್ಲಿಸಲು ಅರ್ಹರು. ಮಾರ್ಚ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.

ಕನ್ನಡ - 89, ಇಂಗ್ಲಿಷ್ - 145, ಇತಿಹಾಸ - 50, ಅರ್ಥಶಾಸ್ತ್ರ - 90, ರಾಜ್ಯಶಾಸ್ತ್ರ - 25, ಸಮಾಜಶಾಸ್ತ್ರ - 25, ಭೂಗೋಳ ಶಾಸ್ತ್ರ - 10, ವಾಣಿಜ್ಯ ಶಾಸ್ತ್ರ - 150, ಭೌತಶಾಸ್ತ್ರ - 30, ರಸಾಯನಶಾಸ್ತ್ರ - 30, ಗಣಿತ - 30, ಜೀವಶಾಸ್ತ್ರ - 30, ಕಂಪ್ಯೂಟರ್ ಸೈನ್ಸ್ - 110 ಹುದ್ದೆಗಳನ್ನು ತುಂಬಲಾಗುತ್ತದೆ. 

ಸಾಮಾನ್ಯ ವರ್ಗದವರಿಗೆ 40 ವರ್ಷ, ಪ್ರವರ್ಗ 2ಎ, 2ಬಿ, 3ಎ & 3ಬಿ ಯವರಿಗೆ 43 ವರ್ಷ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ45 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 

ನೇರ ನೇಮಕಾತಿ ಮೂಲಕ ಆಯ್ಕೆಗೊಂಡ ಅಭ್ಯರ್ಥಿಗಳು ಎರಡು ವರ್ಷ ಖಾಯಂಪೂರ್ವ ಅವಧಿಯಲ್ಲಿರುತ್ತಾರೆ. 2024ರ ಪರಿಷ್ಕೃತ ವೇತನ ಶ್ರೇಣಿ ಅನ್ವಯ ರೂ.69,250 ರಿಂದ ರೂ.1,34,200 ಸಂಬಳವಿದೆ.

ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/indexnewಗೆ ಸಂಪರ್ಕಿಸಬಹುದು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.