ಕೆಇಎ: ಸಿವಿಲ್ ಕಾನ್ಸ್‌ಟೇಬಲ್ ಪರೀಕ್ಷೆ.. ಕೀ ಉತ್ತರ ಪ್ರಕಟ
KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಸಿವಿಲ್ ಕಾನ್ಸ್‌ಟೇಬಲ್ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿದೆ.
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), 3,991 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಆಗಸ್ಟ್ 2 ಭಾನುವಾರದಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು.
ಸದ್ಯ ಈ ಪರೀಕ್ಷೆಯ ಕೀ ಉತ್ತರಗಳನ್ನು 'ಕೆಇಎ' ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ 'ಎಕ್ಸ್'ನಲ್ಲಿಯೂ ಪೋಸ್ಟ್ ಮಾಡಲಾಗಿದ್ದು, ಈ ಕೀ ಉತ್ತರಗಳಿಗೆ ಏನಾದರೂ ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 6 ರಂದು ಬೆಳಗ್ಗೆ 10.30 ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಒಟ್ಟು 884 ಕೇಂದ್ರಗಳಲ್ಲಿ ಈ ಪರೀಕ್ಷೆಯನ್ನು ನಡೆಸಲಾಗಿದ್ದು, ಲಕ್ಷಾಂತರ ಅಭ್ಯರ್ಥಿಗಳು ಹಾಜರಾಗಿದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.