ಕೆಇಎ: FDA & SDA ಹುದ್ದೆ.. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

KEA: ಕೆಇಎ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿದೆ.

Nov 25, 2026 - 14:52
Nov 25, 2026 - 14:53
ಕೆಇಎ: FDA & SDA ಹುದ್ದೆ.. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.

ಸರ್ಕಾರದ ವಿವಿಧ ಇಲಾಖೆ, ಸಂಸ್ಥೆ, ನಿಗಮ/ ಮಂಡಳಿಗಳಲ್ಲಿ ಖಾಲಿಯಿರುವ 5,431 ಪ್ರಥಮ ದರ್ಜೆ (FDA) ಹಾಗೂ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿದೆ. 

ಸದ್ಯ, ನ.30 ರವರೆಗೆ ಅರ್ಜಿ ಹಾಕಬಹುದು. ಈ ಮೊದಲು ನ.25 ಕಡೆ ದಿನವಾಗಿತ್ತು.

'ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ನಿಗದಿಯಂತೆ ಲಿಖಿತ ಪರೀಕ್ಷೆ ನಡೆಯಲಿದೆ' ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/indexnewಗೆ ಸಂಪರ್ಕಿಸಬಹುದು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.