KEA: ತೋಟಗಾರಿಕೆ ಇಲಾಖೆ ನೇಮಕಾತಿ ಪರೀಕ್ಷೆ ಮುಂದೂಡಿಕೆ

KEA: ತೋಟಗಾರಿಕೆ ಇಲಾಖೆ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.

Sep 23, 2026 - 10:39
KEA: ತೋಟಗಾರಿಕೆ ಇಲಾಖೆ ನೇಮಕಾತಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ನೇಮಕಕ್ಕೆ ಸೆ.26 ಮತ್ತು 27 ರಂದು ನಡೆಸಬೇಕಿದ್ದ ಪರೀಕ್ಷೆ ದಿನಾಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮುಂದೂಡಿದೆ.

ಈ ಎರಡು ದಿನಾಂಕಗಳಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕ್ಲರ್ಕ್ ಮತ್ತು ಶಿವಮೊಗ್ಗ ಹಾಲು ಒಕ್ಕೂಟ (SHIMUL) ಸಂಸ್ಥೆಯ ನೇಮಕಾತಿ ಪರೀಕ್ಷೆಗಳು ನಿಗದಿಯಾಗಿದ್ದು, ಹಲವು ಅಭ್ಯರ್ಥಿಗಳು ಪರೀಕ್ಷೆಗಳನ್ನು ಮುಂದೂಡಲು ಮನವಿ ಮಾಡಿದ್ದರು.

ಸೆ.26 ರಂದು ನಡೆಯಬೇಕಿದ್ದ ಕಲ್ಯಾಣ ಕರ್ನಾಟಕ ವೃಂದದ  ಸಹಾಯಕ ತೋಟಗಾರಿಕೆ ನಿರ್ದೇಶಕರ ನೇಮಕಾತಿ ಪರೀಕ್ಷೆಯನ್ನು ಅಕ್ಟೋಬರ್ 6ಕ್ಕೆ ಮುಂದೂಡಲಾಗಿದೆ. ಸೆ.27 ರಂದು ನಡೆಸಬೇಕಿದ್ದ ಪರೀಕ್ಷೆಗಳನ್ನು ವಿಭಜಿಸಿ ಸೆ.29 ಮತ್ತು 30 ರಂದು ನಡೆಸಲಾಗುವುದು ಹೇಳಿದೆ.

ಸೆ. 29 ರಂದು ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ಸಾಮಾನ್ಯ ಜ್ಞಾನ- ಪತ್ರಿಕೆ- 1 ಪರೀಕ್ಷೆ ನಡೆಯಲಿದೆ. ಸೆ.30 ರಂದು ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ನಿರ್ದಿಷ್ಟ ಪತ್ರಿಕೆ - ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ.

ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ನಿರ್ದೇಶಕರ ಹುದ್ದೆಯ ನಿರ್ದಿಷ್ಟ ಪತ್ರಿಕೆ- 2ರ ಪರೀಕ್ಷೆ ನಿಗದಿಯಂತೆ ಸೆ.28 ರಂದೇ ಜರುಗಲಿದೆ. ಅಭ್ಯರ್ಥಿಗಳು ಪರಿಷ್ಕೃತ ಪ್ರವೇಶ ಪತ್ರಗಳನ್ನು ಸೆ.23 ರಂದು ಮಧ್ಯಾಹ್ನ 2 ಗಂಟೆ ನಂತರ ಡೌನ್‌ಲೋಡ್ ಮಾಡಿಕೊಲ್ಲಿ ಎಂದು ಕೆಇಎ ತಿಳಿಸಿದೆ. 

ತೋಟಗಾರಿಕೆ ಇಲಾಖೆಯಲ್ಲಿ ಖಾಲಿಯಿರುವ 85 ಹುದ್ದೆಗಳ ಭರ್ತಿಗೆ ಆಗಸ್ಟ್ ತಿಂಗಳಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.