KEA: ರಾಜ್ಯದಲ್ಲಿ 4,744 ಹುದ್ದೆಗಳ ನೇಮಕಾತಿ.. ಅತಿ ಶೀಘ್ರದಲ್ಲೇ ಅರ್ಜಿ ಆಹ್ವಾನ
KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಮಹತ್ವದ ಪ್ರಕಟಣೆ ಹೊರಡಿಸಿದೆ. 4,744 ಹುದ್ದೆಗಳ ಭರ್ತಿಗೆ ಅತಿ ಶೀಘ್ರದಲ್ಲೇ ಅರ್ಜಿ ಆಹ್ವಾನಿಸಲಿದೆ.
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority - KEA) ಮಹತ್ವದ ಪ್ರಕಟಣೆ ಹೊರಡಿಸಿದೆ.
ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಒಟ್ಟು 4,744 (ತಾಂತ್ರಿಕೇತರ-ತಾಂತ್ರಿಕ) ಹುದ್ದೆಗಳ ನೇಮಕಾತಿಗೆ ಈ ತಿಂಗಳಲ್ಲಿ ಅಧಿಸೂಚನೆ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದೆ.
ಪದವಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,421 ಮತ್ತು ಪಿಯುಸಿ ಮಟ್ಟದ ತಾಂತ್ರಿಕೇತರ ಹುದ್ದೆಗಳು 2,062 ಖಾಲಿಯಿದ್ದು, ತಾಂತ್ರಿಕ ಹುದ್ದೆಗಳು 261 ಇವೆ. ನಂತರದ ದಿನಗಳಲ್ಲಿ ಇನ್ನೂ ಹೊಸ ಇಲಾಖೆ ಹಾಗೂ ಹುದ್ದೆಗಳು ಸೇರುವ ಸಾಧ್ಯತೆಯಿದೆ ಎಂದು ಹೇಳಿದೆ.
ಈ ಹುದ್ದೆಗಳಿಗೆ ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಲಿಖಿತ ಪರೀಕ್ಷೆ ಕೂಡ ನಡೆಸಲು ಸಿದ್ಧತೆಗಳು ನಡೆದಿದ್ದು, ಪಠ್ಯಕ್ರಮದ ವಿವರಗಳನ್ನು ಕೂಡ ನೀಡಲಾಗಿದೆ. ಒಮ್ಮೆ ನೋಡಿಕೊಂಡು ಅಧ್ಯಯನ ಆರಂಭಿಸಿ ಎಂದು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.
ಹೆಚ್ಚಿನ ಮಾಹಿತಿಗೆ ಈ 'ಲಿಂಕ್'ನ್ನು ಕ್ಲಿಕ್ ಮಾಡಿರಿ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.