ಕೆಳದಿ ಶಿವಪ್ಪ ನಾಯಕ ಕೃಷಿ, ತೋಟಗಾರಿಕೆ ವಿವಿ: ಪದವಿ ಸೀಟುಗಳಿಗೆ ಅರ್ಜಿ ಆಹ್ವಾನ
Keladi Shivappa Nayaka University: 2026-27ನೇ ಶೈಕ್ಷಣಿಕ ಸಾಲಿನ ಯುಜಿ ಲ್ಯಾಟರಲ್ ಎಂಟ್ರಿ ಕೋಟಾದಡಿ ಅಂತಿಮ ಸುತ್ತಿನ ಪ್ರವೇಶಾತಿ ಪ್ರಕ್ರಿಯೆಯ ನಂತವು, ಭರ್ತಿಯಾಗದೇ ಉಳಿದಿರುವ ವಿವಿಧ ಸ್ನಾತಕ ಪದವಿ ಕಾರ್ಯಕ್ರಮಗಳ ಪ್ರವರ್ಗವಾರು ಸೀಟುಗಳನ್ನು ನ.24 ರಂದು ಮುಕ್ತ ಕೌನ್ಸೆಲಿಂಗ್ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ.
ಮಂಗಳೂರು: ಶಿವಮೊಗ್ಗದ 'ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ' 2026-27ನೇ ಶೈಕ್ಷಣಿಕ ಸಾಲಿನ ಯುಜಿ ಲ್ಯಾಟರಲ್ ಎಂಟ್ರಿ ಕೋಟಾದಡಿ ಅಂತಿಮ ಸುತ್ತಿನ ಪ್ರವೇಶಾತಿ ಪ್ರಕ್ರಿಯೆಯ ನಂತವು, ಭರ್ತಿಯಾಗದೇ ಉಳಿದಿರುವ ವಿವಿಧ ಸ್ನಾತಕ ಪದವಿ ಕಾರ್ಯಕ್ರಮಗಳ ಪ್ರವರ್ಗವಾರು ಸೀಟುಗಳನ್ನು ನ.24 ರಂದು ಮುಕ್ತ ಕೌನ್ಸೆಲಿಂಗ್ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ.
ಈ ಮುಕ್ತ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪ್ರವೇಶಾತಿ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣದಲ್ಲಿ (https://uahs.edu.in/) ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸೂಕ್ತ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಖುದ್ದಾಗಿ ಕುಲಸಚಿವರ ಕಾರ್ಯಾಲಯ, ಶರಾವತಿ ಆಡಳಿತ ಭವನ, 2ನೇ ಮಹಡಿ, ಇರುವಕ್ಕಿ-577412 ಶಿವಮೊಗ್ಗ ಜಿಲ್ಲೆ ಇಲ್ಲಿಗೆ ನ.24 ರ ಬೆಳಗ್ಗೆ 11 ಗಂಟೆಯೊಳಗೆ ಸಲ್ಲಿಸಬೇಕು. ನಿಗದಿತ ಸಮಯ ಮೀರಿದ ಅಭ್ಯರ್ಥಿಯ ಅರ್ಜಿಯನ್ನು ಪರಿಗಣಿಸುವುದಿಲ್ಲ.
ಲಭ್ಯವಿರುವ ಸೀಟುಗಳಿಗೆ ಮುಕ್ತ ಕೌನ್ಸೆಲಿಂಗ್ ಆಯ್ಕೆ ಪ್ರಕ್ರಿಯೆಗಳನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಇರುವಕ್ಕಿ ಮುಖ್ಯ ಆವರಣದಲ್ಲಿ ನಡೆಸಲಾಗುತ್ತದೆ.
ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಸ್ನಾತಕ ಪದವಿಗಳಿಗೆ ನಡೆಸಿದ ಯುಜಿ ಲ್ಯಾಟರಲ್ ಎಂಟ್ರಿ-2026 ಕೋಟಾದ ಪ್ರವೇಶ ಪರೀಕ್ಷೆಯನ್ನು ಬರೆದು ರ್ಯಾಂಕ್ ಪಡೆದ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿ ವಿಶ್ವವಿದ್ಯಾಲಯದ ವೆಬ್‍ಸೈಟ್ https://uahs.edu.in/ನಲ್ಲಿ ಲಭ್ಯವಿರುತ್ತದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.