Kia: ಕಿಯಾ ಕಾರುಗಳಿಗೆ ಮನಸೋತ ಜನ.. ಭಾರೀ ಸಂಖ್ಯೆಯಲ್ಲಿ ಸೇಲ್ಸ್!
Kia India: ಕಿಯಾ ಇಂಡಿಯಾ ಕಂಪನಿಯು ಈ 2026ರ ಜುಲೈನಲ್ಲಿ ಒಟ್ಟು 28,200 ಯುನಿಟ್ ಕಾರುಗಳನ್ನು ಮಾರಾಟಗೊಳಿಸಲಾಗಿದೆ.
ಕಿಯಾ ಇಂಡಿಯಾ (Kia India), ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ಈ 2026ರ ಜುಲೈನಲ್ಲಿ ಒಟ್ಟು 28,200 ಯುನಿಟ್ ಕಾರುಗಳನ್ನು ಮಾರಾಟಗೊಳಿಸಲಾಗಿದೆ. 2025ರ ಇದೇ ಅವಧಿಯಲ್ಲಿ 22,135 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಸಂಖ್ಯೆಯು ವರ್ಷದಿಂದ ವರ್ಷಕ್ಕೆ (YoY) ಶೇಕಡ 27.4% ಪ್ರಗತಿಯಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಸೋನೆಟ್, ಸೈರಸ್ ಹಾಗೂ ಸೆಲ್ಟೋಸ್ ಸೇರಿದಂತೆ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದ್ದು, ಗ್ರಾಹಕರು ಕೂಡ ಮನಸೊತ್ತಿದ್ದಾರೆ.
ಈಚೆಗೆ ಬಿಡುಗಡೆಯಾಗಿದ್ದ ಹೊಸ 'ಕಿಯಾ ಸೈರಸ್ ಇವಿ' ಹೇಗಿದೆ?
ಇದೊಂದು ಎಲೆಕ್ಟ್ರಿಕ್ ಎಸ್‌ಯುವಯಾಗಿದ್ದು, ರೂ.13.50 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಐವರಿ ಸಿಲ್ವರ್ ಮ್ಯಾಟ್, ಫ್ರಾಸ್ಟ್ ಬ್ಲೂ, ಗ್ರಾವಿಟಿ ಗ್ರೇ, ಪ್ಯೂಟರ್ ಆಲಿವ್, ಮ್ಯಾಗ್ಮಾ ರೆಡ್, ಐವರಿ ಸಿಲ್ವರ್ ಗ್ಲೋಸ್, ಅರೋರಾ ಬ್ಲ್ಯಾಕ್ ಪರ್ಲ್, ಗ್ಲೇಸಿಯರ್ ವೈಟ್ ಪರ್ಲ್ ಹಾಗೂ ಎಕ್ಸ್‌ಕ್ಲೂಸಿವ್ ಮ್ಯಾಟ್ ಗ್ರ್ಯಾಫೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ಈ ಕಾರು 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಿಂಗಲ್-ಚಾರ್ಜ್‌ನಲ್ಲಿ 443 ರಿಂದ 526 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ.
ನೂತನ 'ಕಿಯಾ ಸೈರಸ್ ಇವಿ' 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 465 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಟ್ರಿಪಲ್-ಸ್ಕ್ರೀನ್ ಸೆಟಪ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಇಪಿಬಿ (ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಮೌಂಟ್‌ಗಳನ್ನು ತನ್ನಾಗಿಸಿಕೊಂಡಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.