Kia: ಕಿಯಾ ಕಾರುಗಳಿಗೆ ಮನಸೋತ ಜನ.. ಭಾರೀ ಸಂಖ್ಯೆಯಲ್ಲಿ ಸೇಲ್ಸ್!

Kia India: ಈ 2026ರ ಆಗಸ್ಟ್ ತಿಂಗಳಲ್ಲಿ ಕಿಯಾ ಕಾರುಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ.

Sep 1, 2026 - 19:26
Sep 1, 2026 - 20:47
Kia: ಕಿಯಾ ಕಾರುಗಳಿಗೆ ಮನಸೋತ ಜನ.. ಭಾರೀ ಸಂಖ್ಯೆಯಲ್ಲಿ ಸೇಲ್ಸ್!

ಕಿಯಾ ಇಂಡಿಯಾ (Kia India) ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ಈ 2026ರ ಆಗಸ್ಟ್ ತಿಂಗಳಲ್ಲಿ ಭಾರೀ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸಿದೆ. ಒಟ್ಟು 29,042 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 19,608 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 48.1% ಪ್ರಗತಿಯಾಗಿದೆ. 

ಇದೇ ಜುಲೈನಲ್ಲಿ ಬಿಡುಗಡೆಗೊಂಡ ಕಿಯಾ ಸೈರಸ್ ಇವಿ ವಿಶೇಷತೆಗಳೇನು:

ಈ ಎಲೆಕ್ಟ್ರಿಕ್ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿವೆ. ರೂ.13.50 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್ ಹಾಗೂ ಎಕ್ಸ್-ಲೈನ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. 

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಐವರಿ ಸಿಲ್ವರ್ ಮ್ಯಾಟ್, ಫ್ರಾಸ್ಟ್ ಬ್ಲೂ, ಗ್ರಾವಿಟಿ ಗ್ರೇ, ಪ್ಯೂಟರ್ ಆಲಿವ್, ಮ್ಯಾಗ್ಮಾ ರೆಡ್, ಐವರಿ ಸಿಲ್ವರ್ ಗ್ಲೋಸ್, ಅರೋರಾ ಬ್ಲ್ಯಾಕ್ ಪರ್ಲ್ ಮತ್ತು ಗ್ಲೇಸಿಯರ್ ವೈಟ್ ಪರ್ಲ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ. 197 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,550 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. 

ನೂತನ 'ಸೈರಸ್ ಇವಿ'  5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 465 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 

ಈ ಕಾರು ಹೆಚ್ಚು ಬಲಿಷ್ಠ ಪವರ್‌ಟ್ರೇನ್‌ನ್ನು ಹೊಂದಿದೆ. 42 ಮತ್ತು 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಿಂಗಲ್-ಚಾರ್ಜ್‌ನಲ್ಲಿ 443 ರಿಂದ 526 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ.

ಇದರ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ಟ್ರಿಪಲ್-ಸ್ಕ್ರೀನ್ ಸೆಟಪ್‌, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್‌ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಮೌಂಟ್‌ಗಳನ್ನು ಪಡೆದಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.