KPSC: 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ.. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

KPSC: ಕರ್ನಾಟಕ ಲೋಕಸೇವಾ ಆಯೋಗ, 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸದ್ಯ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದ್ದು, ಸೆ.7ಕ್ಕೆ ಕೊನೆಯಾಗುತ್ತದೆ.

Sep 3, 2026 - 13:29
KPSC: 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ.. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC), 319 (297 ಉಳಿಕೆ ಮೂಲ ವೃಂದ & 22 ಹೈದರಾಬಾದ್ ಕರ್ನಾಟಕ ವೃಂದ) ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸದ್ಯ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದ್ದು, ಸೆ.7ಕ್ಕೆ ಕೊನೆಯಾಗುತ್ತದೆ.

ಶಿಕ್ಷಣ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿವಿಯಿಂದ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಕನಿಷ್ಠ 21 ವರ್ಷವಿದೆ. ಸಾಮಾನ್ಯ ವರ್ಗಕ್ಕೆ 40 ವರ್ಷ, ಪ್ರವರ್ಗ 2ಎ, 2ಬಿ & 3ಎ, 3ಬಿಗೆ 43 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಪರೀಕ್ಷಾ ಪ್ರಯತ್ನಗಳು: ಸಾಮಾನ್ಯ ವರ್ಗದವರಿಗೆ 5 ಬಾರಿ, ಪ್ರವರ್ಗ-1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 7 ಬಾರಿ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ ಯಾವುದೇ ಮಿತಿಯಿಲ್ಲ. 

ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ.600, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿಯವರಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯಿದೆ.

ಹೆಚ್ಚಿನ ವಿವರಗಳಿಗೆ https://kpsc.kar.nic.in/ಗೆ ಸಂಪರ್ಕಿಸಿರಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.