KPSC: 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ.. ನಾಳೆ ಕಡೆಯ ದಿನ
KPSC: ಕರ್ನಾಟಕ ಲೋಕಸೇವಾ ಆಯೋಗ, 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ನಾಳೆಯೇ ಕಡೆ ದಿನವಾಗಿದೆ.
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC), 319 (297 ಉಳಿಕೆ ಮೂಲ ವೃಂದ & 22 ಹೈದರಾಬಾದ್ ಕರ್ನಾಟಕ ವೃಂದ) ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ನಾಳೆಯೇ (ಸೆ.7) ಕಡೆ ದಿನವಾಗಿದೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಶ್ವವಿದ್ಯಾಲಯದಿಂದ ಪದವಿ/ ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿರಬೇಕು.
ವಯಸ್ಸು: ಕನಿಷ್ಠ 21 ವರ್ಷವಿದೆ. ಉಳಿದಂತೆ ಸಾಮಾನ್ಯ ವರ್ಗಕ್ಕೆ 40 ವರ್ಷ, ಪ್ರವರ್ಗ 2ಎ, 2ಬಿ ಹಾಗೂ 3ಎ, 3ಬಿಗೆ 43 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ.600, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿಯವರಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಹೆಚ್ಚಿನ ಮಾಹಿತಿ: https://kpsc.kar.nic.in/.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.