KPSC: 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗೆ ಅರ್ಜಿ ಆಹ್ವಾನ

KPSC: ಕರ್ನಾಟಕ ಲೋಕಸೇವಾ ಆಯೋಗ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಇಂದಿನಿಂದ (ಆಗಸ್ಟ್ 1) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ.

Aug 1, 2026 - 13:40
Aug 1, 2026 - 13:41
KPSC: 319 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 319 (297 ಉಳಿಕೆ ಮೂಲ ವೃಂದ & 22 ಹೈದರಾಬಾದ್ ಕರ್ನಾಟಕ ವೃಂದ) ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಇಂದಿನಿಂದ (ಆಗಸ್ಟ್ 1) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ.

'ಗ್ರೂಪ್ ಎ' 117 ಹುದ್ದೆಗಳು: ಸಹಾಯಕ ಆಯುಕ್ತರು (ಕಿರಿಯ ಶ್ರೇಣಿ) ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು ವಾಣಿಜ್ಯ ತೆರಿಗೆ ಇಲಾಖೆ, ಸಹಾಯಕ ನಿರ್ದೇಶಕರು ಖಜಾನೆ ಇಲಾಖೆ, ಕಾರ್ಯನಿರ್ವಾಹಕ ಅಧಿಕಾರಿ/ಸಹಾಯಕ ಕಾರ್ಯದರ್ಶಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ & ಸಹಾಯಕ ನಿರ್ದೇಶಕರು ಗ್ರೇಡ್-1 ಸಮಾಜ ಕಲ್ಯಾಣ ಇಲಾಖೆ ಹುದ್ದೆಗಳನ್ನು ತುಂಬಲಾಗುತ್ತದೆ. 

'ಗ್ರೂಪ್ ಬಿ' 202 ಹುದ್ದೆಗಳು: ತಹಶೀಲ್ದಾರ್ (ಗ್ರೇಡ್-2) ಕಂದಾಯ ಇಲಾಖೆ, ವಾಣಿಜ್ಯ ತೆರಿಗೆ ಅಧಿಕಾರಿ ವಾಣಿಜ್ಯ ತೆರಿಗೆ ಇಲಾಖೆ, ಸಹಾಯಕ ಅಧೀಕ್ಷಕರು ಒಳಾಡಳಿತ ಇಲಾಖೆ (ಕಾರಾಗೃಹ), ಸಹಕಾರ ಸಂಘಗಳ ಸಹಾಯಕ ನಿಬಂಧಕರು ಸಹಕಾರ ಇಲಾಖೆ, ಸಹಾಯಕ ನಿರ್ದೇಶಕರು ಕೃಷಿ ಮಾರಾಟ ಇಲಾಖೆ (ಸಹಕಾರ ಇಲಾಖೆ), ಅಬಕಾರಿ ಉಪ ಅಧೀಕ್ಷಕರು ಆರ್ಥಿಕ ಇಲಾಖೆ (ಅಬಕಾರಿ ಇಲಾಖೆ), ಉದ್ಯೋಗಾಧಿಕಾರಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮುಖ್ಯಾಧಿಕಾರಿ (ಗ್ರೇಡ್-1) ನಗರಾಭಿವೃದ್ಧಿ ಇಲಾಖೆ, ಸಹಾಯಕ ಖಜಾನಾಧಿಕಾರಿ ಆರ್ಥಿಕ ಇಲಾಖೆ (ಖಜಾನೆ), ಸಹಾಯಕ ನಿರ್ದೇಶಕರು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಶಾಖಾಧಿಕಾರಿ ಕರ್ನಾಟಕ ಸರ್ಕಾರದ ಸಚಿವಾಲಯ, ಶಾಖಾಧಿಕಾರಿ ಕರ್ನಾಟಕ ಲೋಕಸೇವಾ ಆಯೋಗ & ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 

ಶಿಕ್ಷಣ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ವಿಶ್ವವಿದ್ಯಾಲಯದ ಸ್ನಾತಕ ಪದವಿ/ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಕನಿಷ್ಠ ವಯೋಮಿತಿ: 21 ವರ್ಷವಿದೆ. ಸಾಮಾನ್ಯ ವರ್ಗಕ್ಕೆ 40 ವರ್ಷ, ಪ್ರವರ್ಗ 2ಎ, 2ಬಿ ಹಾಗೂ 3ಎ, 3ಬಿಗೆ 43 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 45 ವರ್ಷ ನಿಗದಿಪಡಿಸಲಾಗಿದೆ. 

ಪರೀಕ್ಷಾ ಯತ್ನಗಳು: ಸಾಮಾನ್ಯ ವರ್ಗದವರಿಗೆ 5 ಬಾರಿ, ಪ್ರವರ್ಗ-1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 7 ಬಾರಿ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ ಯಾವುದೇ ಮಿತಿಯಿಲ್ಲ. 

ಅರ್ಜಿ ಶುಲ್ಕ: ಸಾಮಾನ್ಯ ವರ್ಗದವರಿಗೆ ರೂ.600, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. 

ಅರ್ಜಿ ಸಲ್ಲಿಸಲು ಕಡೆ ದಿನ: ಆಗಸ್ಟ್ 31 ಆಗಿದ್ದು, ನವೆಂಬರ್ 15 ಪೂರ್ವಭಾವಿ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ https://kpsc.kar.nic.in/ಗೆ ಸಂಪರ್ಕಿಸಬಹುದು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.