ಕೆಪಿಎಸ್‌ಸಿ ಹಗರಣ: ಜ್ಞಾನೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

KPSC Scam: ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಎದುರಿಸುತ್ತಿರುವ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

Oct 24, 2026 - 16:20
Oct 24, 2026 - 16:30
ಕೆಪಿಎಸ್‌ಸಿ ಹಗರಣ: ಜ್ಞಾನೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ಬೆಂಗಳೂರು: ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಎದುರಿಸುತ್ತಿರುವ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಕಾನೂನು ಕ್ರಮ (ಪ್ರಾಸಿಕ್ಯೂಷನ್) ಜರುಗಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 

ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ, ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಯುವಜನತೆಯ ಭವಿಷ್ಯದ ಜೊತೆ ಆಟವಾಡುವ ಯಾವುದೇ ಕೃತ್ಯಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದಿದ್ದಾರೆ.  

ಸಾರ್ವಜನಿಕ ನೇಮಕಾತಿ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಭ್ರಷ್ಟಾಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ, ಆಡಳಿತಕ್ಕೆ ಕಪ್ಪುಚುಕ್ಕೆ ತರುವ ಕೃತ್ಯಗಳಿಗೆ ಮನ್ನಣೆಯಿಲ್ಲ ಎಂದು ತಿಳಿಸಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.