KSET ಪರೀಕ್ಷೆಗೆ ಅರ್ಜಿ ಆಹ್ವಾನ.. ಸೆ.5 ಕಡೆ ದಿನ

KSET: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಹೊರಡಿಸಲಾಗಿದೆ.

Aug 12, 2026 - 17:01
KSET ಪರೀಕ್ಷೆಗೆ ಅರ್ಜಿ ಆಹ್ವಾನ.. ಸೆ.5 ಕಡೆ ದಿನ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (KSET) ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಪರೀಕ್ಷೆ ನಡೆಸಲಿದೆ.

ವಿದ್ಯಾರ್ಹತೆ: ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ/ ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಾಮಾನ್ಯ ವರ್ಗದವರು ಶೇಕಡ 55% ಹಾಗೂ ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳು 50% ಅಂಕಗಳನ್ನು ಗಳಿಸಿರಬೇಕು. 

ವಯೋಮಿತಿ: ಈ ಪರೀಕ್ಷೆ ಬರೆಯಲು ಯಾವುದೇ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿಲ್ಲ. 

ಎಲ್ಲಿ ಪರೀಕ್ಷೆ: 37 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ದಾವಣಗೆರೆ, ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು. 

ಪ್ರಶ್ನೆ ಪತ್ರಿಕೆ ವಿಧಾನ: ಆಫ್‌ಲೈನ್ ಒಎಂಆರ್ ಮಾದರಿಯಲ್ಲಿ ಇರಲಿದ್ದು, ಒಟ್ಟು 150 ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ. ಇದಕ್ಕೆ 300 ಅಂಕವಿದ್ದು, 3 ಗಂಟೆಗಳ ಸಮಯಾವಕಾಶವಿರುತ್ತದೆ. 

ಅರ್ಜಿ ಸಲ್ಲಿಸಲು ಕಡೆ ದಿನ/ ಶುಲ್ಕ: ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿದೆ. ಶುಲ್ಕ ಪಾವತಿಗೆ ಸೆಪ್ಟೆಂಬರ್ 6 ರವರೆಗೆ ಅವಕಾಶವಿದೆ. ಸಾಮಾನ್ಯ, 2ಎ/ 2ಬಿ / 3ಎ / 3ಬಿ ಹಾಗೂ ಇತರೆ ರಾಜ್ಯದವರಿಗೆ ರೂ.750 ಮತ್ತು ವರ್ಗ-1, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ ರೂ.500 ಶುಲ್ಕವಿದೆ.

ಪರೀಕ್ಷೆ ದಿನಾಂಕ: ಅಕ್ಟೋಬರ್ 1 ರಂದು ಪ್ರವೇಶ ಪತ್ರ ಬಿಡುಗಡೆಗೊಳಿಸಲಾಗುತ್ತದೆ. ಅಕ್ಟೋಬರ್ 11 ರಂದು ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/kset2026ಗೆ ಸಂಪರ್ಕಿಸಿರಿ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.