Karnataka Police: 1,789 ಮೀಸಲು ಕಾನ್ಸ್‌ಟೇಬಲ್ ಹುದ್ದೆ.. ಇಂದಿನಿಂದ ಅರ್ಜಿ ಸಲ್ಲಿಕೆ ಶುರು
KRSP Constable Recruitment 2026: Total 1,789 Vacancies: ಕರ್ನಾಟಕ ಪೊಲೀಸ್ ಇಲಾಖೆ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 1,789 ಮೀಸಲು ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆ (Karnataka Police Department), ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 1,789 ಮೀಸಲು ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಇಂದಿನಿಂದ (ಜುಲೈ 13) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಲಿದೆ.
ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA), ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ. ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವರು ಅರ್ಜಿ ಸಲ್ಲಿಕೆ ಮಾಡಬಹುದು.
ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ವಯೋಮಿತಿಯಿದೆ. ನಿಯಮಾನುಸಾರ ಸಡಿಲಿಯನ್ನು ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 35 ವರ್ಷದವರೆಗೆ ಅವಕಾಶವಿದೆ. ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ನಿಗದಿಪಡಿಲಾಗಿದೆ.
ಆಯ್ಕೆಯಾದವರಿಗೆ ಮಾಸಿಕ ರೂ.37500 ರಿಂದ ರೂ.76100 ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಆಗಸ್ಟ್ 10 ಕಡೆ ದಿನವಾಗಿದೆ. ಸಾಮಾನ್ಯ, ಇತರೆ ಪ್ರವರ್ಗಗಳ (ಪ್ರವರ್ಗ-2ಎ/2ಬಿ/3ಎ/3ಬಿ) ಅಭ್ಯರ್ಥಿಗಳು ರೂ.750 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳು ರೂ.500 ಪರೀಕ್ಷಾ ಶುಲ್ಕ ಪಾವತಿಸಬೇಕು.
ಹೆಚ್ಚಿನ ಮಾಹಿತಿಗೆ https://cetonline.karnataka.gov.in/kea/ಗೆ ಸಂಪರ್ಕಿಸಿರಿ.


