ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ: ಅರ್ಜಿ ಆಹ್ವಾನ
Kumbara Community Development Corporation: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-2ಎ ಅಡಿಯಲ್ಲಿ 6(ಎ) ಯಿಂದ 6(ಕ್ಯೂ) ವರೆಗೆ ಬರುವ ಕುಂಬಾರ, ಚಕ್ರಸಾಲಿ, ಗುಣಗ, ಗಣಿಗ, ಕೊಯವ, ಕುಲ, ಕುಲಾಲ, ಕುಂಬಾರ್, ಕುಂಬಾರ್ಡ, ಕುಮ್ಮಾರ, ಕುಸವನ್, ಮೂಲ್ಯ, ಸಜ್ಜನ ಕುಂಬಾರ, ಖುಮಾರ, ಕುಂಭಾರ, ಖುಂಭಾರ ಮತ್ತು ಕುಲಾಲರ್ ಸಮುದಾಯದ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಸ್ವಯಂ ಉದ್ಯೋಗ ವೈಯಕಿಕ ಸಾಲ ಯೋಜನೆ:
ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ರೂ.1 ಲಕ್ಷಗಳವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಠ ರೂ20 ಸಾವಿರ ಸಹಾಯಧನ ಹಾಗೂ ರೂ.1 ಲಕ್ಷದಿಂದ ರೂ.2 ಲಕ್ಷದವರೆಗೆ ಶೇ.15ರಷ್ಟು ಕನಿಷ್ಠ ರೂ.20 ಸಾವಿರದವರೆಗೆ ಗರಿಷ್ಠ ರೂ.30 ಸಾವಿರದವರೆಗೆ ಸಹಾಯಧನ ಉಳಿಕೆ ಮೊತ್ತ ಶೇ.4ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯಬಹುದು.
ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98 ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ಅರಿವು-ಶೈಕ್ಷಣಿಕ ಸಾಲ ಯೋಜನೆ:
ಈ ಯೋಜನೆಯಡಿ ಸಿಇಟಿ ಮತ್ತು ನೀಟ್ ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ 2ಎ ಅಡಿಯಲ್ಲಿ 6(ಎ) ಯಿಂದ 6(ಕ್ಯೂ) ವರೆಗೂ ಬರುವ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳ ವ್ಯಾಸಂಗಕ್ಕೆ ವಾರ್ಷಿಕ 1 ಲಕ್ಷ ರೂ.ಗಳಂತೆ ಕೋರ್ಸ್ ಅವಧಿಗೆ ಗರಿಷ್ಠ 4 ಲಕ್ಷ ರೂ.ಗಳಿಂದ ರೂ 5 ಲಕ್ಷ ರೂ.ಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು.
ಸ್ವಾವಲಂಬಿ ಸಾರಥಿ ಯೋಜನೆ:
ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್ಗಳಿಂದ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಟ ರೂ.3 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುತ್ತದೆ. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ- 2ಎ ಅಡಿಯಲ್ಲಿ 6ಎ) ಯಿಂದ 6(ಕ್ಯೂ) ವರೆಗೂ ಬರುವ ಕುಂಬಾರ ಮತ್ತು ಅದರ ಉಪಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98 ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
ಈ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದು ಹೊಂದಾಣಿಕೆಯಾಗಬೇಕು.
ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 16 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ www.dbcdc.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಮತ್ತು 8050770004 ಅಥವಾ 8050770005, ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ:0824-2456544 ಯನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.