Breaking: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ!

Kundapura Businessman Shot Dead: ಉಡುಪಿ ಜಿಲ್ಲೆಯ ಕುಂದಾಪುರದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಉದ್ಯಮಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

Jul 31, 2026 - 09:33
Jul 31, 2026 - 15:39
Breaking: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ!

ಕುಂದಾಪುರ: ಕರಾವಳಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಉದ್ಯಮಿಯೊಬ್ಬರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
 
ಮೃತರನ್ನು ಐವನ್ ರಿಚರ್ಡ್ ಮಸ್ಕರೇನಸ್ (45) ಎಂದು ಗುರುತಿಸಲಾಗಿದೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಅವರು ತಮ್ಮ ಕಾರಿನ ಸಮೀಪದಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಐವನ್‌ ಕಾರಿನಲ್ಲಿ ಮಹಿಳೆಯ ಜತೆ ಸಂಚರಿಸುತ್ತಿದ್ದಾಗ ಫೈರಿಂಗ್‌ ನಡೆದಿದೆ ಎನ್ನಲಾಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.