ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ
Uppinangady: ಭ್ರಷ್ಟಾಚಾರದ ದೂರಿನ ಹಿನ್ನೆಲೆ, ಇಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಪುತ್ತೂರು: ಭ್ರಷ್ಟಾಚಾರದ ದೂರಿನ ಹಿನ್ನೆಲೆ, ಇಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಗಾನ ಕುಮಾರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ.
ಈ ಕುರಿತ ಸುದ್ದಿ ತಿಳಿದ ಕೂಡಲೇ ಪಂಚಾಯಿತಿ ಕಚೇರಿಗೆ ಆಗಮಿಸಿದ ಸ್ಥಳೀಯ ವರ್ತಕರು, ಉದ್ಯಮಿಗಳು ಮತ್ತು ಸಾರ್ವಜನಿಕರು, ಅವ್ಯವಹಾರಗಳನ್ನು ಬಿಚ್ಚಿಟ್ಟು , ದೂರು ಸಹ ನೀಡಿದ್ದಾರೆ.
ದೂರುಗಳನ್ನು ಆಲಿಸಿದ ಡಿವೈಎಸ್‌ಪಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಯೊಬ್ಬರ ಅಹವಾಲುಗಳನ್ನು ಸ್ವೀಕರಿಸಿದ್ದೇವೆ. ಈ ಬಗ್ಗೆ ತನಿಖೆಯನ್ನು ಮಾಡುತ್ತೇವೆ. ಮತ್ಯಾರಾದರೂ ದೂರು ನೀಡುವವರೂ ಇದ್ದರೆ, ಸಂಜೆ 4ಕ್ಕೆ ಗ್ರಾಮ ಪಂಚಾಯಿತಿಗೆ ಬರಬಹುದು ಎಂದು ಹೇಳಿದ್ದಾರೆ.