'ಮಾ ಇಂಟಿ ಬಂಗಾರಂ' ಜುಲೈ 17ರಿಂದ ಒಟಿಟಿಯಲ್ಲಿ ಸ್ಟ್ರೀಮಿಂಗ್

Maa Inti Bangaram: ತೆಲುಗಿನ ಆ್ಯಕ್ಷನ್ ಕಾಮಿಡಿ 'ಮಾ ಇಂಟಿ ಬಂಗಾರಂ' ಜುಲೈ 17ರಿಂದ ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ.

Jul 15, 2026 - 15:50
'ಮಾ ಇಂಟಿ ಬಂಗಾರಂ' ಜುಲೈ 17ರಿಂದ ಒಟಿಟಿಯಲ್ಲಿ ಸ್ಟ್ರೀಮಿಂಗ್

ಹೈದರಾಬಾದ್: ಸಮಂತಾ ನಟನೆಯ ತೆಲುಗಿನ ಆ್ಯಕ್ಷನ್ ಕಾಮಿಡಿ 'ಮಾ ಇಂಟಿ ಬಂಗಾರಂ' ಒಟಿಟಿಯಲ್ಲಿ ಬಿಡುಗಡೆಗೊಳ್ಳಲು ಸಿದ್ಧವಾಗಿದೆ. ಇದೇ ಜುಲೈ 17 ರಿಂದ ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ. 

ಜೂನ್ 19 ರಂದು ಬಿಡುಗಡೆಯಾಗಿದ್ದ ಈ ಸಿನಿಮಾ, ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿತ್ತು. ರೂ.100 ಕೋಟಿಗೂ ಅಧಿಕ ಗ್ರಾಸ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಅತಿಹೆಚ್ಚು ಗಳಿಕೆ ಕಂಡ ತೆಲುಗಿನ ಮೊದಲ ಮಹಿಳಾ ಪ್ರಧಾನ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. 

ಬಿ.ವಿ.ನಂದಿನಿ ರೆಡ್ಡಿ ಆಕ್ಷನ್ ಕಟ್ ಹೇಳಿದ್ದು, ಸಮಂತಾರ ಪತಿ ರಾಜ್ ನಿಡಿಮೋರು ಕಥೆ ಬರೆದಿದ್ದಾರೆ. ಅವರದ್ದೇ ಓನ್ ಬ್ಯಾನರ್‌ನಡಿ ನಿರ್ಮಿಸಲಾಗಿದೆ. 

ಕನ್ನಡದ ಖ್ಯಾತ ನಟ ದಿಗಂತ್ ಮಂಚಾಲೆ, ಗುಲ್ಶನ್ ದೇವಯ್ಯ, ಗೌತಮಿ ಹಾಗೂ ಮಂಜುಷಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.