'ಎ ಫಾರ್ ಆನಂದ್' ಚಿತ್ರದಲ್ಲಿ ಮಾಧುರಿ ದೀಕ್ಷಿತ್?

A For Anand: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ರ ಹೊಸ ಸಿನಿಮಾ 'ಎ ಫಾರ್ ಆನಂದ್' ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು ಬಾಲಿವುಡ್‌ನ ನಟಿ ಮಾಧುರಿ ದೀಕ್ಷಿತ್‌ ಅವರೊಂದಿಗೆ ಸಿನಿತಂಡವು ಮಾತುಕತೆ ನಡೆಸುತ್ತಿದೆ.

Aug 15, 2026 - 19:14
'ಎ ಫಾರ್ ಆನಂದ್' ಚಿತ್ರದಲ್ಲಿ ಮಾಧುರಿ ದೀಕ್ಷಿತ್?

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ನಟನೆಯ ಹೊಸ ಸಿನಿಮಾ ಎ ಫಾರ್ ಆನಂದ್ (A For Anand) ಸಖತ್ ಹೈಪ್ ಕ್ರಿಯೇಟ್ ಮಾಡುತ್ತಿದೆ.  

ಬಾಲಿವುಡ್‌ನ ನಟಿ ಮಾಧುರಿ ದೀಕ್ಷಿತ್‌ (Madhuri Dixit) ಈ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಲು ಸಿನಿತಂಡವು ಮಾತುಕತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಆದಾಗ್ಯೂ ಈ ಕುರಿತಂತೆ ಯಾವುದೇ ಅಧಿಕೃತ ವಿವರಗಳು ಹೊರಬಿದ್ದಿಲ್ಲ. 

ಘೋಸ್ಟ್ ಖ್ಯಾತಿಯ ನಿರ್ದೇಶಕ ಶ್ರೀನಿ ಆಕ್ಷನ್ ಕಟ್ ಹೇಳುತ್ತಿದ್ದು, ಶಿವರಾಜ್‌ಕುಮಾರ್ ಅವರ ಹೋಮ್ ಬ್ಯಾನರ್ 'ಗೀತಾ ಪಿಕ್ಚರ್ಸ್'ನಡಿ ನಿರ್ಮಿಸಲು ಸಕಲ ಸಿದ್ಧತೆಗಳು ನಡೆಯುತ್ತಿವೆ. ಇದು ಶಿಕ್ಷಕ - ವಿದ್ಯಾರ್ಥಿ ನಡುವಿನ ಬಾಂಧವ್ಯದ ಕಥೆಯನ್ನು ಹೊಂದಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.