D.Y.Patil: ಮಾಜಿ ರಾಜ್ಯಪಾಲ ಡಿ.ವೈ.ಪಾಟೀಲ್ ನಿಧನ

D.Y.Patil Passes Away: ಹಿರಿಯ ಕಾಂಗ್ರೆಸ್ ನಾಯಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಮಾಜಿ ರಾಜ್ಯಪಾಲ ಡಿ.ವೈ.ಪಾಟೀಲ್ (D.Y.Patil) ಇಂದು ನಿಧನರಾಗಿದ್ದಾರೆ.

Aug 4, 2026 - 18:15
Aug 4, 2026 - 18:37
D.Y.Patil: ಮಾಜಿ ರಾಜ್ಯಪಾಲ ಡಿ.ವೈ.ಪಾಟೀಲ್ ನಿಧನ

ಕೊಲ್ಲಾಪುರ: ಹಿರಿಯ ಕಾಂಗ್ರೆಸ್ ನಾಯಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಮಾಜಿ ರಾಜ್ಯಪಾಲ ಡಿ.ವೈ.ಪಾಟೀಲ್ (D.Y.Patil) ಇಂದು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 

ದೀರ್ಘಕಾಲದ ಅನಾರೋಗ್ಯದಿಂದಾಗಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಅಕ್ಟೋಬರ್ 22, 1935ರಲ್ಲಿ ಜನಿಸಿದ್ದರು. ಬಿಹಾರ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದಾರೆ. 

'ಡಿ.ವೈ.ಪಾಟೀಲ್' ಗ್ರೂಪ್ ಸ್ಥಾಪಿಸಿ, ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡ್ದಿದಾರೆ. ಸದ್ಯ ಈ ಸಂಸ್ಥೆಯಡಿ ದೇಶಾದ್ಯಂತ 182ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಹಾಗೂ 7 ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಇವರನ್ನು ಅಭಿಮಾನಿಗಳು ಪ್ರೀತಿಯಿಂದ 'ದಾದಾ' ಎಂದು ಕರೆಯುತ್ತಿದ್ದರು.

ಪುತ್ರರಾದ ಮಾಜಿ ಸಚಿವ & ಕಾಂಗ್ರೆಸ್ ನಾಯಕ ಸತೇಜ್ ಪಾಟೀಲ್, ಸಂಜಯ್ ಪಾಟೀಲ್ ಹಾಗೂ ಅಜಿಂಕ್ಯ ಪಾಟೀಲ್ ಅವರನ್ನು ಅಗಲಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.