Mahindra: 682 ಕಿ.ಮೀ ರೇಂಜ್.. ಈ ಮಹೀಂದ್ರಾ SUVಗೆ ಫುಲ್ ಡಿಮ್ಯಾಂಡ್!

Mahindra BE 6 Suv June 2026 Sales Details: ಈ 2026ರ ಜೂನ್ ತಿಂಗಳು 'ಮಹೀಂದ್ರಾ ಬಿಇ 6' ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Jul 13, 2026 - 15:16
Jul 14, 2026 - 06:35
Mahindra: 682 ಕಿ.ಮೀ ರೇಂಜ್.. ಈ ಮಹೀಂದ್ರಾ SUVಗೆ ಫುಲ್ ಡಿಮ್ಯಾಂಡ್!

ಬೆಂಗಳೂರು: ಮಹೀಂದ್ರಾ ಬಿಇ 6 (Mahindra BE 6) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಈ ಕಾರಿಗೆ ಗ್ರಾಹಕರು ಮನಸೊತ್ತಿದ್ದಾರೆ. ಈ 2026ರ ಜೂನ್ ತಿಂಗಳಲ್ಲಿ ಒಟ್ಟು 1,150 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 902 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ - ಅಂಶವನ್ನು ವಿಶ್ಲೇಷಿಸಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 27.49% ಬೆಳವಣಿಗೆಯಾಗಿದೆ. 

ಇದು ರೂ.18.90 ಲಕ್ಷದಿಂದ ರೂ.28.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 20-ಇಂಚಿನ ವೀಲ್‌ಗಳನ್ನು ಪಡೆದಿದೆ. ಎವರೆಸ್ಟ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ಡೆಸರ್ಟ್ ಮಿಸ್ಟ್, ಡೀಪ್ ಫಾರೆಸ್ಟ್, ಟ್ಯಾಂಗೋ ರೆಡ್, ಫೈರ್‌ಸ್ಟಾರ್ಮ್ ಆರೆಂಜ್ ಹಾಗೂ ನಪೋಲಿ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. 

ಈ ಎಲೆಕ್ಟ್ರಿಕ್ ಎಸ್‌ಯುವಿಯು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರುವ ಮಾಡೆಲ್, ಪೂರ್ತಿ ಚಾರ್ಜ್‌ನಲ್ಲಿ 556 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಅದೇ ರೀತಿಯಲ್ಲಿ  79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ ಪಡೆದಿರುವ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 682 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 

ನೂತನ 'ಮಹೀಂದ್ರಾ ಬಿಇ 6' ಕಾರು 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 202 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 6.7 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 

ಇದು ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು, ಕೀಲೆಸ್ ಎಂಟ್ರಿ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.