2026ರ ಹೊಸ 'ಮಹೀಂದ್ರಾ ಸ್ಕಾರ್ಪಿಯೋ ಲೈಫ್‌ಸ್ಟೈಲರ್' ಅನಾವರಣ

Mahindra Scorpio Lifestyler: ಬಹುನಿರೀಕ್ಷಿತ 2026ರ 'ಮಹೀಂದ್ರಾ ಸ್ಕಾರ್ಪಿಯೋ ಲೈಫ್‌ಸ್ಟೈಲರ್' ಪಿಕ್ಅಪ್ ಟ್ರಕ್, ಶುಕ್ರವಾರ ಅದ್ದೂರಿಯಾಗಿ ಅನಾವರಣಗೊಂಡಿದೆ.

Aug 15, 2026 - 18:13
2026ರ ಹೊಸ 'ಮಹೀಂದ್ರಾ ಸ್ಕಾರ್ಪಿಯೋ ಲೈಫ್‌ಸ್ಟೈಲರ್' ಅನಾವರಣ

ಬಹುನಿರೀಕ್ಷಿತ  2026ರ ಮಹೀಂದ್ರಾ ಸ್ಕಾರ್ಪಿಯೋ ಲೈಫ್‌ಸ್ಟೈಲರ್ (Mahindra Scorpio Lifestyler) ಪಿಕ್ಅಪ್ ಟ್ರಕ್, ಶುಕ್ರವಾರ ಅದ್ದೂರಿಯಾಗಿ ಅನಾವರಣಗೊಂಡಿದೆ. ಇದು 2027ರಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದ್ದು, ರೂ.19.79 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. 

ಸದ್ಯಕ್ಕೆ ಈ ಕಾರಿನ ಹೊರಭಾಗದ ವಿನ್ಯಾಸದ ಕುರಿತಂತೆ ಬಹುತೇಕ ಎಲ್ಲ ಅಂಶಗಳನ್ನು ಬಹಿರಂಗಪಡಿಸಲಾಗಿದೆ. ಇದು 'ಸ್ಕಾರ್ಪಿಯೋ ಎನ್'ಗೆ ಹೋಲಿಕೆಯಾಗಲಿದೆ. 

ಪ್ರೀಮಿಯಂ ಲುಕ್ ಹೊಂದಿದ್ದು, ತುಂಬಾ ಚೆನ್ನಾಗಿರುವ ಗ್ರಿಲ್, ಅಗ್ರೆಸಿವ್ ಬಂಪರ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ವಿಂಡ್‌ಶೀಲ್ಡ್, ಸಿಗ್ನೇಚರ್ ವಿಂಡೋ ಲೈನ್, ರೂಫ್ ರೈಲ್‌, ಫೆಂಡರ್-ಮೌಂಟೆಡ್ ಸ್ನಾರ್ಕೆಲ್, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಅಕ್ವಾರೀಫ್, ಸಹಾರಾ ಬೀಜ್ ಮತ್ತು ಆರ್ಟೆಮಿಸ್ ಗ್ರೇ ಎಂಬ ಬಣ್ಣಗಳನ್ನು ಒಳಗೊಂಡಿದೆ. 

ಇದು ಸ್ಟ್ಯಾಂಡರ್ಡ್ 'ಸ್ಕಾರ್ಪಿಯೋ ಎನ್'ನಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. 2-ಲೀಟರ್ ಎಂಸ್ಟಾಲಿಯನ್ ಟರ್ಬೊ-ಪೆಟ್ರೋಲ್ ಹಾಗೂ 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್ ಪಡೆದಿರಲಿದೆ. 

ಈ ನೂತನ ಪಿಕ್ಅಪ್ ಟ್ರಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡ್ಯುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟುಗಳು, ಮತ್ತು ವೈರ್‌ಲೆಸ್ ಫೋನ್ ಚಾರ್ಜರ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎನ್ನಲಾಗುತ್ತಿದೆ. 

ಸುರಕ್ಷತೆಗೂ ಹೆಸರುವಾಸಿಯಾಗಿರಲಿದೆ. 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಫ್ರಂಟ್-ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.