ಹೊಸ ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್ vs ಟಾಟಾ ಸಫಾರಿ: ಯಾವುದು ಬೆಸ್ಟ್.. ನೀವೇ ಹೇಳಿ?

Mahindra Scorpio N Facelift vs Tata Safari: ಇತ್ತೀಚೆಗೆ ಹೊಚ್ಚ ಹೊಸ 2026ರ ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಇದಕ್ಕೆ ಟಾಟಾ ಸಫಾರಿ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇಲ್ಲಿ ಈ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತು ಹೋಲಿಕೆ ಮಾಡಿದ್ದೇವೆ.

Aug 7, 2026 - 17:45
ಹೊಸ ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್ vs ಟಾಟಾ ಸಫಾರಿ: ಯಾವುದು ಬೆಸ್ಟ್.. ನೀವೇ ಹೇಳಿ?

ಇತ್ತೀಚೆಗೆ ಹೊಚ್ಚ ಹೊಸ 2026ರ ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್ (Mahindra Scorpio N Facelift) ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಇದಕ್ಕೆ ಟಾಟಾ ಸಫಾರಿ (Tata Safari) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಇಲ್ಲಿ ಈ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತು ಹೋಲಿಕೆ ಮಾಡಿದ್ದೇವೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ. 

ಬೆಲೆ:

ನೂತನ 'ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್' ರೂ.13.69 ಲಕ್ಷದಿಂದ ರೂ.25.49 ಲಕ್ಷ ಹಾಗೂ 'ಸಫಾರಿ' ರೂ.13.40 ಲಕ್ಷದಿಂದ ರೂ.26.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇವೆರೆಡು ಎಸ್‌ಯುವಿಗಳು ಹೆಚ್ಚು-ಕಮ್ಮಿ ಒಂದೇ ಬೆಲೆಯಲ್ಲಿ ಸಿಗುತ್ತವೆ.

ವಿನ್ಯಾಸ & ಬಣ್ಣಗಳು: 

ಈ ಕಾರುಗಳು ಒಂದ್ಕಕಿಂತ ಒಂದು ಅದ್ಬುತವಾದ ವಿನ್ಯಾಸವನ್ನು ಹೊಂದಿವೆ. 'ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್' ದೊಡ್ಡದಾದ ಡ್ಯುಯಲ್-ಪಾಡ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್, 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಹಾಗೂ ಸಿಗ್ನೇಚರ್ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಪಡೆದಿದೆ. ಗ್ಯಾಲಕ್ಸಿ ಗ್ರೇ, ಓಷಿಯಾನಿಕ್, ಎವರೆಸ್ಟ್ ವೈಟ್, ಡೀಪ್ ಫಾರೆಸ್ಟ್ & ಸ್ಟೆಲ್ತ್ ಬ್ಲಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 

'ಟಾಟಾ ಸಫಾರಿ' ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್‌ ಲ್ಯಾಂಪ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಸೂಪರ್ನೋವಾ ಕಾಪರ್, ಫ್ರಾಸ್ಟ್ ವೈಟ್, ರಾಯಲ್ ಬ್ಲೂ, ಪ್ಯೂರ್ ಗ್ರೇ ಹಾಗೂ ಕಾರ್ಬನ್ ಬ್ಲ್ಯಾಕ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ. 

ಆಸನ ಆಯ್ಕೆ: 

ಇವೆರೆಡು ಕಾರುಗಳು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 6 ಹಾಗೂ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು  ಆರಾಮದಾಯಕವಾಗಿ ಸಂಚಾರ ಮಾಡಬಹುದು.

ಎಂಜಿನ್: 

ಈ ಕಾರುಗಳು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿವೆ. 'ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್' 2-ಲೀಟರ್ ಎಂಸ್ಟಾಲಿಯನ್ ಟರ್ಬೊ-ಪೆಟ್ರೋಲ್ ಹಾಗೂ  2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 15.42 ರಿಂದ 15.94 ಕಿ.ಮೀವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. 

'ಸಫಾರಿ' 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್‌ ಎಂಜಿನ್‌ನ್ನು ಪಡೆದಿದೆ. 14 ರಿಂದ 16.9 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 

ವೈಶಿಷ್ಟ್ಯಗಳು: 

ಇವೆರೆಡು ಕಾರುಗಳು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿವೆ. 'ಮಹೀಂದ್ರಾ ಸ್ಕಾರ್ಪಿಯೋ ಎನ್ ಫೇಸ್‌ಲಿಫ್ಟ್' 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್, ಡ್ಯುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ  6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಫ್ರಂಟ್-ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.

'ಟಾಟಾ ಸಫಾರಿ' 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಂಬಿಯೆಂಟ್ ಲೈಟಿಂಗ್, ಪನೋರಮಿಕ್ ಸನ್‌ರೂಫ್, ಡ್ಯುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಆಟೋಮೆಟಿಕ್ ಎಸಿ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.