Mahindra: ಇದೇ ಮಹೀಂದ್ರಾ ಕಂಪನಿ ತಾಕತ್ತು.. ಈ 7-ಸೀಟರ್ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ತು!

Mahindra XEV 9S: ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ 'ಮಹೀಂದ್ರಾ ಎಕ್ಸ್ಇವಿ 9ಎಸ್' ಎಲೆಕ್ಟ್ರಿಕ್ ಎಸ್‌ಯುವಿ , 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ.

Nov 17, 2026 - 18:34
Nov 17, 2026 - 18:36
Mahindra: ಇದೇ ಮಹೀಂದ್ರಾ ಕಂಪನಿ ತಾಕತ್ತು.. ಈ 7-ಸೀಟರ್ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಸಿಕ್ತು!

Mahindra XEV 9S: 'ಮಹೀಂದ್ರಾ ಎಕ್ಸ್ಇವಿ 9ಎಸ್' ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಭಾರತ್ ಎನ್‌ಸಿಎಪಿ (Bharat NCAP) ಈ ಕಾರನ್ನು ಅತ್ಯಂತ ಸುರಕ್ಷಿತ ಎಂದು ತೀರ್ಮಾನಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ.

'ಮಹೀಂದ್ರಾ ಎಕ್ಸ್ಇವಿ 9ಎಸ್'ನ್ನು ಭಾರತ್ ಎನ್‌ಸಿಎಪಿಯ ವಿವಿಧ ಪರೀಕ್ಷೆಗೆ ಒಳಪಡಿಸಲಾಗಿದ್ದು, ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 31.15 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. 

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಮ್), ಇಪಿಬಿ (ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ISOFIX ಚೈಲ್ಡ್ ಸೀಟ್ ಮೌಂಟ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. 

'ಮಹೀಂದ್ರಾ ಎಕ್ಸ್ಇವಿ 9ಎಸ್' ವಿಶೇಷತೆಗಳೇನು:

ಇದು ರೂ.20.65 ಲಕ್ಷದಿಂದ ರೂ.30.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರ ಮಾಡಬಹುದು. 

ನೂತನ 'ಮಹೀಂದ್ರಾ ಎಕ್ಸ್ಇವಿ 9ಎಸ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 59, 70 ಮತ್ತು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಆಯ್ಕೆಯನ್ನು ಪಡೆದಿದೆ. 521 ರಿಂದ 679 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 202 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದ್ದು, ಬರೀ 7 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.