Mahindra: 7-ಸೀಟರ್ ಎಲೆಕ್ಟ್ರಿಕ್ SUVಗೆ ಮನಸೋತ ಜನ.. ಫುಲ್ ಡಿಮ್ಯಾಂಡ್!
Mahindra XEV 9S: 'ಮಹೀಂದ್ರಾ ಎಕ್ಸ್ಇವಿ 9ಎಸ್' ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. 2026 ಅಕ್ಟೋಬರ್ ತಿಂಗಳಲ್ಲೂ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ.
Mahindra XEV 9S: 'ಮಹೀಂದ್ರಾ ಎಕ್ಸ್ಇವಿ 9ಎಸ್' ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರಿಗೆ ಗ್ರಾಹಕರು ಕೂಡ ಮನಸೊತ್ತಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಈ 2026 ಅಕ್ಟೋಬರ್ ತಿಂಗಳಲ್ಲಿ ಒಟ್ಟು 4,865 ಯುನಿಟ್‌ಗಳನ್ನು ವಿತರಿಸಲಾಗಿದೆ.
'ಮಹೀಂದ್ರಾ ಎಕ್ಸ್ಇವಿ 9ಎಸ್' ವಿಶೇಷತೆಗಳೇನು:
ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದ್ದು, ರೂ.20.65 ಲಕ್ಷದಿಂದ ರೂ.30.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ.
ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 70 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಆಯ್ಕೆಯನ್ನು ಒಳಗೊಂಡಿದೆ. 521 ರಿಂದ 679 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ನೂತನ 'ಮಹೀಂದ್ರಾ ಎಕ್ಸ್ಇವಿ 9ಎಸ್' ಎಸ್‌ಯುವಿಯಲ್ಲಿ 6/7 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು.
ಇದು ಟ್ರಿಪಲ್-ಸ್ಕ್ರೀನ್ ಡ್ಯಾಶ್‌ಬೋರ್ಡ್, 16-ಸ್ಪೀಕರ್ ಹರ್ಮನ್ ಕಾರ್ಡನ್ ವಾಯ್ಸ್ ಸಿಸ್ಟಮ್, 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.