Mahindra: ಇದೇ ಮಹೀಂದ್ರಾದ ಪವರ್.. ಈ ಕಾರಿಗೆ 5-ಸ್ಟಾರ್ ರೇಟಿಂಗ್ ಸಿಕ್ತು!

Mahindra XUV 7XO: ಭಾರತ್ ಎನ್‌ಸಿಎಪಿ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಕಾರನ್ನು ಅತ್ಯಂತ ಸುರಕ್ಷಿತ ಎಂದು ತೀರ್ಮಾನಿಸಿದೆ.

Sep 15, 2026 - 18:48
Mahindra: ಇದೇ ಮಹೀಂದ್ರಾದ ಪವರ್.. ಈ ಕಾರಿಗೆ 5-ಸ್ಟಾರ್ ರೇಟಿಂಗ್ ಸಿಕ್ತು!

Mahindra XUV 7XO: ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ ಜನಪ್ರಿಯ ಎಸ್‌ಯುವಿಯಾಗಿದೆ. ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಭಾರತ್ ಎನ್‌ಸಿಎಪಿ (Bharat NCAP) ಈ ಕಾರನ್ನು ಅತ್ಯಂತ ಸುರಕ್ಷಿತ ಎಂದು ತೀರ್ಮಾನಿಸಿದ್ದು, 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ.

ಇದು ವಯಸ್ಕ ಪ್ರಯಾಣಿಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 30.76 ಅಂಕಗಳು ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 44.97 ಅಂಕಗಳನ್ನು ಪಡೆಯುವಲ್ಲಿ ಸಫಲವಾಗಿದೆ. 

ಈ ಕಾರು ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. 7-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್-ಪಾರ್ಕಿಂಗ್ ಸೆನ್ಸರ್‌ಗಳು, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು & 540-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ವಿಶೇಷತೆಗಳೇನು:

ಇದು ರೂ.13.99 ಲಕ್ಷದಿಂದ ರೂ.25.79 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7, ಎಎಕ್ಸ್7 ಟಿ ಹಾಗೂ ಎಎಕ್ಸ್7 ಎಲ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. 

ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಬುಲಾ ಬ್ಲ್ಯೂ, ಮಿಡ್‌ನೈಟ್ ಬ್ಲ್ಯಾಕ್, ಗ್ಯಾಲಕ್ಸಿ ಗ್ರೇ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಸೇರಿದಂತೆ ನಾನಾ ಬಣ್ಣಗಳೊಂದಿಗೂ ಲಭ್ಯವಿದೆ. 

ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್, 2.2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 13 ರಿಂದ 17 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 

ಇದು  6/ 7 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು 240 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 

ಈ ಕಾರು ಟ್ರಿಪಲ್ ಸ್ಕ್ರೀನ್ ಸೆಟಪ್, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಮಲ್ಟಿ ಕಲರ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ರೇರ್ ಸೀಟ್‌ಗಳಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.