Mahindra: 7-ಸೀಟರ್.. ಈ ಆನೆ ಗಾತ್ರದ ಕಾರಿಗೆ ಮನಸೋತ ಜನ!
Mahindra XUV 7XO: ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ ಜನಪ್ರಿಯ ಎಸ್‌ಯುವಿಯಾಗಿದೆ. ಈ 2026ರ ಅಕ್ಟೋಬರ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.
Mahindra XUV 7XO: ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರಿಗೆ ಗ್ರಾಹಕರು ಕೂಡ ಮನಸೊತ್ತಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ.
ಈ 2026ರ ಅಕ್ಟೋಬರ್ ತಿಂಗಳಲ್ಲಿ ಒಟ್ಟು 10,254 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 10,139 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 1.13% ಪ್ರಗತಿಯಾಗಿದೆ.
'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ವಿಶೇಷತೆಗಳೇನು:
ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದ್ದು, ರೂ.13.99 ಲಕ್ಷದಿಂದ ರೂ.25.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಎವರೆಸ್ಟ್ ವೈಟ್, ನೆಬುಲಾ ಬ್ಲ್ಯೂ, ಡಸರ್ಟ್ ಮಿಸ್ಟ್, ಮಿಡ್‌ನೈಟ್ ಬ್ಲ್ಯಾಕ್, ಗ್ಯಾಲಕ್ಸಿ ಗ್ರೇ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' 6/ 7 ಆಸನಗಳನ್ನು ಪಡೆದಿದ್ದು, 2 ಕುಟುಂಬ ಸುಲಭವಾಗಿ ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 240 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 13 ರಿಂದ 17 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಇದು ಟ್ರಿಪಲ್ ಸ್ಕ್ರೀನ್ ಸೆಟಪ್, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಮಲ್ಟಿ-ಕಲರ್ ಆಂಬಿಯೆಂಟ್ ಲೈಟಿಂಗ್, ಪನೋರಮಿಕ್ ಸನ್‌ರೂಫ್ ಮತ್ತು ವೆಂಟಿಲೇಟೆಡ್ ರೇರ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.