Mahindra: ಆನೆ ಗಾತ್ರದ ಈ ಮಹೀಂದ್ರಾ SUV ಬೆಲೆ ಏರಿಕೆ.. ಎಷ್ಟಾಗಿದೆ?
Mahindra XUV 7XO: 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಸದ್ಯ ಈ ಕಾರಿನ ಬೆಲೆಯನ್ನು ಅಧಿಗೊಳಿಸಲಾಗಿದೆ.
ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ (Mahindra XUV 7XO) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಸದ್ಯ ಈ ಕಾರಿನ ಬೆಲೆಯನ್ನು ಅಧಿಗೊಳಿಸಲಾಗಿದೆ. ರೂಪಾಂತರಗಳಿಗೆ ಅನುಗುಣವಾಗಿ ರೂ.8,000 ರಿಂದ ರೂ.20,000 ಹೆಚ್ಚಿಸಲಾಗಿದೆ. ದರ ಏರಿಕೆ ಬಳಿಕ, ರೂ.13.99 ಲಕ್ಷದಿಂದ ರೂ.25.79 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.
ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ ವಿಶೇಷತೆಗಳೇನು:
ಇದು ಎಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7, ಎಎಕ್ಸ್7 ಟಿ ಹಾಗೂ ಎಎಕ್ಸ್7 ಎಲ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಬುಲಾ ಬ್ಲ್ಯೂ, ಮಿಡ್‌ನೈಟ್ ಬ್ಲ್ಯಾಕ್, ಗ್ಯಾಲಕ್ಸಿ ಗ್ರೇ ಮತ್ತು ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2-ಲೀ. ಟರ್ಬೊ ಪೆಟ್ರೋಲ್ ಮತ್ತು 2.2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 13 ರಿಂದ 17 ಕಿ.ಮೀ ವರೆಗೆ ಮೈಲೇಜ್‌ನ್ನು ನೀಡುತ್ತದೆ.
ನೂತನ 'ಮಹೀಂದ್ರಾ ಎಕ್ಸ್‌ಯುವಿ 7ಎಕ್ಸ್ಒ' 6/7 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು 240 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಮಲ್ಟಿ ಕಲರ್ ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ರೇರ್ ಸೀಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ರೇರ್-ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.