ಮಂಗಳೂರು ವಿಶ್ವವಿದ್ಯಾನಿಲಯ: ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳ ಸಾಧನೆ

St Philomena College: ಮಂಗಳೂರು ವಿಶ್ವವಿದ್ಯಾನಿಲಯದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Nov 21, 2026 - 12:31
Nov 21, 2026 - 12:31
ಮಂಗಳೂರು ವಿಶ್ವವಿದ್ಯಾನಿಲಯ: ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳ ಸಾಧನೆ

ಪುತ್ತೂರು: ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ. ಮಹಿಳಾ ತಂಡವು ಸಮಗ್ರವಾಗಿ ಐದು ಮತ್ತು ಪುರುಷರ ತಂಡವು ಏಳನೇ ಸ್ಥಾನ ಪಡೆದುಕೊಂಡಿದೆ.

ಪುರುಷರ ವಿಭಾಗದ ಪೋಲ್ ವಾಲ್ಟ್‌ನಲ್ಲಿ ಪ್ರಥಮ ಬಿಕಾಂ ವಿದ್ಯಾರ್ಥಿ ನಿಹಾಲ್ ಬೆಳ್ಳಿ ಪದಕ ಗಳಿಸಿದ್ದಾರೆ. ಡಿಸ್ಕಸ್ ಥ್ರೋ ಮತ್ತು ಶಾಟ್‌ಪುಟ್‌ನಲ್ಲಿ ತೃತೀಯ ಬಿಎಸ್ಸಿ ವಿದ್ಯಾರ್ಥಿ ರಿತೀಶ್ ತಲಾ ಒಂದು ಕಂಚಿನ ಪದಕ ಪಡೆದಿದ್ದಾರೆ. 4x400 ಮೀಟರ್ ಮಿಶ್ರ ರಿಲೇಯಲ್ಲಿ ದ್ವಿತೀಯ ಬಿಸಿಎಯ ಆಶ್ರಯ್ ಹಾಗೂ ಪ್ರಥಮ ಬಿಕಾಂನ ನಿಶ್ಚಿತ್ ಕಂಚಿನ ಪದಕ ಜಯಿಸಿದ್ದಾರೆ.

ಮಹಿಳಾ ವಿಭಾಗದ ಹೈಜಂಪ್‌ನಲ್ಲಿ ತೃತೀಯ ಬಿಕಾಂನ ಅಮೃತಾ ಮತ್ತು ಹ್ಯಾಮರ್ ಥ್ರೋದಲ್ಲಿ ಪೃಥ್ವಿ ಕಂಚಿನ ಪದಕ ಗೆದ್ದಿದ್ದಾರೆ. 4x400 ಮೀಟರ್ ಮಿಶ್ರ ರಿಲೇಯಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ಕೃತಿ ಕಂಚಿನ ಪದಕ ಜಯಿಸಿದ್ದಾರೆ. ಲಾಂಗ್ ಜಂಪ್‌ ಮತ್ತು 4x400 ಮೀಟರ್ ಮಿಶ್ರ ರಿಲೇಯಲ್ಲಿ ಪ್ರಥಮ ಬಿಎ ವಿದ್ಯಾರ್ಥಿನಿ ಜೀವಿತಾ ತಲಾ ಒಂದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಕ್ರೀಡಾಪಟುಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದ್ದು, ಪದಕ ವಿಜೇತರು ಸೇರಿದಂತೆ ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲಾ ಕ್ರೀಡಾಪಟುಗಳು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.