ಮಂಗಳೂರು ವಿವಿ ಕರಾಟೆ ಸ್ಪರ್ಧೆ: ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
Mangalore University Karate Competition: ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ: ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಈಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು 2 ಚಿನ್ನ, 1 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಜಯಿಸಿದ್ದಾರೆ.
ಪ್ರಥಮ ಎಂಕಾಂ ವಿದ್ಯಾರ್ಥಿ ಅಭಯ ಕೃಷ್ಣ, ಟಿ ಕಟಾ ತಂಡ ವಿಭಾಗ ಹಾಗೂ ಕುಮಿಟೆ ವೈಯುಕ್ತಿಕ ವಿಭಾಗದಲ್ಲಿ ಚಿನ್ನದ ಪದಕ, ಕಟಾ ವೈಯಕ್ತಿಕ ಮತ್ತು ಕುಮಿಟೆ ತಂಡ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ತೃತೀಯ ಬಿಎ ವಿದ್ಯಾರ್ಥಿ ಅರುಣ್ ಕುಮಾರ್ ಎ.ಆರ್, ಕಟಾ ತಂಡ ವಿಭಾಗದಲ್ಲಿ ಚಿನ್ನ, ಕುಮಿಟೆ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಹಾಗೂ ಕುಮಿಟೆ ತಂಡ ವಿಭಾಗದಲ್ಲಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪ್ರಥಮ ಬಿಕಾಂ ವಿದ್ಯಾರ್ಥಿ ನಿಖಿತ್, ಕಟಾ ತಂಡ ವಿಭಾಗದಲ್ಲಿ ಚಿನ್ನ ಹಾಗೂ ಕುಮಿಟೆ ತಂಡ ವಿಭಾಗದಲ್ಲಿ ಕಂಚಿನ ಪದಕಕ್ಕೆ ಭಾಜನರಾಗಿದ್ದಾರೆ. ದ್ವಿತೀಯ ಬಿಬಿಎ ವಿದ್ಯಾರ್ಥಿ ಭವಿಷ್ ಕುಮಿಟೆ ತಂಡ ವಿಭಾಗದಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ.
ತಮಿಳುನಾಡಿನ ಚೆನೈನಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲು ಈ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.