Mangaluru: ಚಿನ್ನ ದರೋಡೆ ಪ್ರಕರಣ ಭೇದಿಸಿದ ಪೊಲೀಸರು, ಮೂವರು ಅರೆಸ್ಟ್‌

Mangaluru: Baikampady Gold Robbery Case Police Crack, 3 Arrested: ಮಂಗಳೂರಿನ ಬೈಕಂಪಾಡಿಯಲ್ಲಿ ನಡೆದ ಚಿನ್ನ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರನ್ನು ಬಂಧಿಸಿದ್ದಾರೆ.

Jul 4, 2026 - 13:48
Jul 4, 2026 - 13:49
Mangaluru: ಚಿನ್ನ ದರೋಡೆ ಪ್ರಕರಣ ಭೇದಿಸಿದ ಪೊಲೀಸರು, ಮೂವರು ಅರೆಸ್ಟ್‌

ಮಂಗಳೂರು: ಇಲ್ಲಿನ ಬೈಕಂಪಾಡಿಯಲ್ಲಿ ನಡೆದ ಚಿನ್ನ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳು ಕೇರಳದಿಂದ ಕಾರಿನಲ್ಲಿ ಬರುತ್ತಿದ್ದ ಸುಬ್ಬರಾವ್‌ ಎಂಬವರನ್ನು ಅಡ್ಡಗಟ್ಟಿ ಸುಮಾರು 180 ಗ್ರಾಂ ಚಿನ್ನಾಭರಣ ದೋಚಿದ್ದರು.  

ಕೇರಳದ ತಲಶ್ಚೇರಿಯ ನಿಮಿಲ್‌ (37), ಕೊಡಗಿನ ಹಕ್ಕತ್ತೂರಿನ ಇರ್ಷಾದ್‌ (40) ಹಾಗೂ ಮಡಿಕೇರಿಯ ಮುಸ್ತಾಫಾ (49) ಬಂಧಿತರಾಗಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 14 ಆರೋಪಿಗಳು ನೇರವಾಗಿ ಭಾಗಿಯಾಗಿದ್ದು, ಸದ್ಯ ಮೂವರನ್ನು ವಶಕ್ಕೆ ಪಡೆಯಲಾಗಿದೆ.   

ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಹತ್ತು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಇನ್ನು 13 ಮಂದಿಯನ್ನು ಬಂಧಿಸುವುದು ಬಾಕಿಯಿದೆ. 

ಆರೋಪಿಗಳೆಲ್ಲರೂ ಮಡಿಕೇರಿ ಹಾಗೂ ಕೇರಳ ರಾಜ್ಯದವರೆಂಬುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಪ್ರಕರಣದ ಉಳಿದ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯವು ಮುಂದುವರಿದಿದೆ.  

ಈ ಪ್ರಕರಣದ ತನಿಖೆಯನ್ನು ಉತ್ತರ ವಿಭಾಗದ ಎಸಿಪಿ ಶ್ರೀಕಾಂತ ಕೆ ಹಾಗೂ ಮಂಗಳೂರು ನಗರದ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ನಡೆಸಲಾಗುತ್ತಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.