ಮಂಗಳೂರು: ನಾಳೆ ಬಿಜೆಪಿ ಬೃಹತ್ ಪಾದಯಾತ್ರೆ.. ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ

Mangaluru: ಮಂಗಳೂರಿನಲ್ಲಿ ನಾಳೆ ಬಿಜೆಪಿ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಿದ್ದಾರೆ.

Nov 5, 2026 - 08:33
Nov 5, 2026 - 08:43
ಮಂಗಳೂರು: ನಾಳೆ ಬಿಜೆಪಿ ಬೃಹತ್ ಪಾದಯಾತ್ರೆ.. ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ

ಮಂಗಳೂರು: ದೇಶದ ಮತಪಟ್ಟಿಯ ಸಮಗ್ರ ಶುದ್ಧೀಕರಣದ 'ಎಸ್ಐಆರ್' ಪ್ರಕ್ರಿಯೆ ಕುರಿತು ಅಪಪ್ರಚಾರ ಮಾಡುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ & ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಿರಂತರ ದಾಳಿ ಮಾಡುತ್ತಿರುವ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಪ್ರಜಾಪ್ರಭುತ್ವ ವಿರೋಧಿ ನಿಲುವುಗಳ ವಿರುದ್ಧ ನಾಳೆ (ನ.6) ನಗರದಲ್ಲಿ 'ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ, ಸಂವಿಧಾನ ರಕ್ಷಿಸಿ' ಬೃಹತ್ ಪಾದಯಾತ್ರೆ ಮತ್ತು ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಈ ಬೃಹತ್ ಕಾರ್ಯಕ್ರಮದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಶಾಸಕರು, ಸಂಸದರು, ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದಿದ್ದಾರೆ. 

ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಡೆಯಲಿರುವ ಈ ಬೃಹತ್ ಪಾದಯಾತ್ರೆಯು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಬಳಿಯ ಮಿನಿ ವಿಧಾನಸೌಧದಿಂದ ಆರಂಭಗೊಂಡು, ಕದ್ರಿ ಮೈದಾನದವರೆಗೆ ಸಾಗಲಿದೆ. ತದನಂತರ ಕದ್ರಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಸಂಸದರು ವಿವರಿಸಿದ್ದಾರೆ. 

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಹುನ್ನಾರದ ವಿರುದ್ಧ ಪ್ರಜಾಪ್ರಭುತ್ವದ ಅಸ್ತಿತ್ವವನ್ನು ಬಲಪಡಿಸಲು ಮತ್ತು ಜನಸಾಮಾನ್ಯರ ಹಕ್ಕುಗಳಿಗಾಗಿ ನಡೆಯುತ್ತಿರುವ ಈ ಹೋರಾಟಕ್ಕೆ ಯುವಜನರ ಬೆಂಬಲ ಅತ್ಯಗತ್ಯವಾಗಿದೆ. ಸಮಸ್ತ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪಾದಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಈ ಕಾರ್ಯಕ್ರಮವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಬೇಕು ಎಂದು ಕ್ಯಾ.ಚೌಟ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.