ಮಂಗಳೂರು ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶಕ್ಕೆ.. ಮೂವರು ಬಂಧನ

Mangaluru CCB Police Operation: ಮಂಗಳೂರಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Oct 9, 2026 - 16:16
ಮಂಗಳೂರು ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ: ರೂ.1.58 ಕೋಟಿ ಮೌಲ್ಯದ ಮಾದಕವಸ್ತು ವಶಕ್ಕೆ.. ಮೂವರು ಬಂಧನ

ಮಂಗಳೂರು: ಇಲ್ಲಿನ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ನಗರದಲ್ಲಿ ನಿಷೇಧಿತ ಮಾದಕ ವಸ್ತು 'ಎಂಡಿಎಂಎ' ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಸುಮಾರು ರೂ.1.58 ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ. ಅಬ್ದುಲ್ ಹಾಪೀಲ್ (25), ಜಿಯಾವುಲ್ ಹಕ್ (30) ಹಾಗೂ ಅಲ್ತಾಫ್, ಪ್ರಾಯ (28) ಬಂಧಿತ ಆರೋಪಿಗಳಾಗಿದ್ದಾರೆ. 

ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪೊಲೀಸರು ಗುರುವಾರ ರಾತ್ರಿ ಉಳ್ಳಾಲದ ಕುಂಪಲ ಡಿಮಾರ್ಟ್ ಬಳಿ ದಾಳಿ ನಡೆಸಿದ್ದಾರೆ.

ಬಂಧಿತ ಆರೋಪಿಗಳಿಂದ 1.8 ಕೆಜಿ ಎಂಡಿಎಂಎ, 3 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸ್ವಿಫ್ಟ್ ಕಾರು, ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಮತ್ತು ವಾಟರ್ ಪ್ಯೂರಿಫೈಯರ್‌ನ್ನು ವಶಕ್ಕೆ ಪಡೆದಿದ್ದಾರೆ. 

ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಲಾಗಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.