ಮಂಗಳೂರು: ವಿಶೇಷ ಕಾರ್ಯಪಡೆಯಿಂದ ಪನಂಬೂರು ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ

Mangaluru: ವಿಶೇಷ ಕಾರ್ಯಪಡೆಯಿಂದ ಪನಂಬೂರು ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

Nov 27, 2026 - 11:52
Nov 27, 2026 - 11:53
ಮಂಗಳೂರು: ವಿಶೇಷ ಕಾರ್ಯಪಡೆಯಿಂದ ಪನಂಬೂರು ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ

ದಕ್ಷಿಣ ಕನ್ನಡ: ಸಂವಿಧಾನ ದಿನಾಚರಣೆ ಹಿನ್ನೆಲೆ, ವಿಶೇಷ ಕಾರ್ಯಪಡೆ ಮಂಗಳೂರು ಘಟಕದ ವತಿಯಿಂದ ಪನಂಬೂರು ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ವಿಶೇಷ ಕಾರ್ಯಪಡೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿ, ಬೀಚ್‌ನಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಕಸ ಹಾಗೂ ಇತರೆ ಅನಗತ್ಯ ವಸ್ತುಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದರು. 

ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸ್ವಚ್ಛ ಪರಿಸರವನ್ನು ಕಾಪಾಡುವಂತೆ ಪ್ರೇರೇಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

ಈ ಕಾರ್ಯಕ್ರಮದಲ್ಲಿ ವಿಶೇಷ ಕಾರ್ಯಪಡೆ ಘಟಕದ ಪೊಲೀಸ್ ಉಪಾಧೀಕ್ಷಕರು ಅಂಬರಾಯ ಕಾಮನಮನಿ ಮತ್ತು ವಿಶೇಷ ಕಾರ್ಯಪಡೆ ಉಡುಪಿ ಕಂಪನಿಯ ಉಸ್ತುವಾರಿ ಅಧಿಕಾರಿ ಸಿದ್ದಯ್ಯ ಮತ್ತು ದಕ್ಷಿಣ ಕನ್ನಡ ಎಸ್ಎಎಫ್ ಕಂಪನಿಯ ಉಸ್ತುವಾರಿ ಅಧಿಕಾರಿ ಅಶೋಕ ಸದಲಗಿ ಮತ್ತು  ಪಣಂಬೂರ ಪೊಲೀಸ್ ಠಾಣೆಯ ಇನ್ನಿತರ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ತಿತರಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.