ಮಂಗಳೂರು: ಬಾರ್‌ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ

Mangaluru: ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ, ಆಹಾರ ಪೂರೈಸುವ ಬಾರ್‌ಗಳ ಮೇಲೆ ಬುಧವಾರ ರಾತ್ರಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Aug 6, 2026 - 18:46
ಮಂಗಳೂರು: ಬಾರ್‌ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ

ಮಂಗಳೂರು: ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯದೊಂದಿಗೆ, ಆಹಾರ ಪೂರೈಸುವ ಬಾರ್‌ಗಳ ಮೇಲೆ ಬುಧವಾರ ರಾತ್ರಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ವೇಳೆ ಬಾರ್‌ಗೆ ಆಗಮಿಸಿದವರ ಗುರುತಿನ ಚೀಟಿ ತಪಾಸಣೆ ನಡೆಸಲಾಯಿತು. ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸದಂತೆ ಪರವಾನಗಿದಾರರಿಗೆ ಸೂಚಿಸಲಾಯಿತು. ಮದ್ಯ ಪೂರೈಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ, ಅಬಕಾರಿ ಅಧಿಕಾರಿಗಳು ಎಚ್ಚರಿಸಿದರು.

ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ನಿರ್ದೇಶನದಂತೆ, ಉಪ ಅಧೀಕ್ಷಕಿ ಗಾಯತ್ರಿ ಸಿ.ಹೆಚ್ ನೇತೃತ್ವದಲ್ಲಿ ನಿರೀಕ್ಷಕ ಚೇತನ್ ಕುಮಾರ್, ಪ್ರತಿಭಾ, ಮಿಲ್ಲರ್ ಜಾನ್ಸನ್ ಡಿಸೋಜ, ಕಮಲ, ದತ್ತಗುರು, ಉಪನಿರೀಕ್ಷಕ ರಜಾಕ್, ಜಯಪ್ಪ ಮತ್ತು ಪೇದೆಗಳಾದ ಸಂದೀಪ್, ಸಂಧ್ಯಾ, ಶಿವಲಿಂಗಪ್ಪ, ಆನಂದ್, ಮಂಜಪ್ಪ, ದೇವರಾಜ್ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.