ಮಂಗಳೂರು ಜೈಲು ಮೇಲೆ ದಾಳಿ: 10 ಮೊಬೈಲ್‌ ವಶಕ್ಕೆ

Mangaluru: ಇಲ್ಲಿನ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಖೈದಿಗಳಿಂದ 10 ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

Sep 8, 2026 - 13:57
ಮಂಗಳೂರು ಜೈಲು ಮೇಲೆ ದಾಳಿ: 10 ಮೊಬೈಲ್‌ ವಶಕ್ಕೆ

ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಖೈದಿಗಳಿಂದ 10 ಮೊಬೈಲ್‌ ವಶಪಡಿಸಿಕೊಂಡಿದ್ದಾರೆ.

ಖೈದಿಗಳಾದ ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್, ಅರ್ಷದ್, ದಾವುದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್ ಮತ್ತು ಅರ್ಫಜ್ ಬಳಿ ಈ ಮೊಬೈಲ್‌ ಫೋನ್‌ಗಳು ಪತ್ತೆಯಾಗಿವೆ. 

ಇವರಲ್ಲಿ 1 ರಿಂದ 4ನೇ ಖೈದಿಗಳು, ಈಚೆಗೆ ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ. ಹಾಗೆಯೇ 5 ರಿಂದ 8 ರವರೆಗಿನ ಖೈದಿಗಳು ಡ್ರಗ್ಸ್‌ ಪೆಡ್ಲೇರ್ ಮತ್ತು 9ನೇ ಖೈದಿ ಕೋಕಾ ಪ್ರಕರಣದ ಆರೋಪಿಯಾಗಿದ್ದಾನೆ. 

ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಸುಧೀರ್‌ ರೆಡ್ಡಿ ತಿಳಿಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.