ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ರೂ.82 ಕೋಟಿ ಮೌಲ್ಯದ ಮಾದಕ ವಸ್ತು ನಾಶ
Mangaluru: ಮಂಗಳೂರು ನಗರ ಪೊಲೀಸರು ಬುಧವಾರ ಸುಮಾರು ರೂ.82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಿದ್ದಾರೆ.
ಮಂಗಳೂರು: ಇಲ್ಲಿನ ನಗರ ಪೊಲೀಸರು ಬುಧವಾರ ಸುಮಾರು ರೂ.82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಿದ್ದಾರೆ. ಮುಲ್ಕಿಯ ಕೊಲ್ನಾಡು ಇಂಡಸ್ಟ್ರಿಯಲ್ ಪ್ರದೇಶದಲ್ಲಿ ನ್ಯಾಯಾಲಯದ ಅನುಮತಿ ಮೇರೆಗೆ, ವೈಜ್ಞಾನಿಕ ಮತ್ತು ಪರಿಸರ ಸ್ನೇಹಿ ವಿಧಾನದಲ್ಲಿ ಈ ಕ್ರಮ ಕೈಗೊಂಡಿದ್ದಾರೆ.
450 ಕೆಜಿ ಗಾಂಜಾ, 43 ಕೆಜಿ 260 ಗ್ರಾಂ ಎಂಡಿಎಂಎ, 80 ಗ್ರಾಂ ಚರಸ್, 880 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ 1 ಕೆಜಿ 200 ಗ್ರಾಂ ಭಾಂಗ್ ನಾಶಪಡಿಸಲಾಗಿದೆ.
ಪ್ರಮುಖವಾಗಿ, 2024ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳ ರೂ.75 ಕೋಟಿ ಮೌಲ್ಯದ 37 ಕೆಜಿ ಎಂಡಿಎಂಎ, 2025ರಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ನಮೂದಾದ ಪ್ರಕರಣಗಳ ರೂ.4.47 ಕೋಟಿ ಮೌಲ್ಯದ 4 ಕೆಜಿ ಎಂಡಿಎಂಎ, ಕೊಣಾಜೆ ಪೊಲೀಸ್ ಠಾಣೆಯ ರೂ.20 ಲಕ್ಷ ಮೌಲ್ಯದ 106 ಕೆಜಿ ಗಾಂಜಾ ಮತ್ತು ಮೂಡಬಿದ್ರೆ ಪೊಲೀಸ್ ಠಾಣೆಯ ರೂ.36 ಲಕ್ಷ ಮೌಲ್ಯದ 111 ಕೆಜಿ ಗಾಂಜಾ ಕೂಡ ಸೇರಿದೆ.

ನಗರದ ಪೊಲೀಸ್ ವ್ಯಾಪ್ತಿಯಲ್ಲಿ ಈವರೆಗೆ 87 ಎನ್‌ಡಿಪಿಎಸ್ ಕೇಸ್ ಹಾಕಲಾಗಿದ್ದು, 157 ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಮಾದಕ ವಸ್ತು ಸೇವನೆ ಸಂಬಂಧ 463 ವ್ಯಕ್ತಿಗಳ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಲಾಗಿದೆ.
ಸಾರ್ವಜನಿಕರು ಮಾದಕ ವಸ್ತುಗಳಿಗೆ ಸಂಬಂದಿಸಿದಂತೆ ಯಾವುದೇ ವಿವರಗಳು ದೊರೆತಲ್ಲಿ ತಕ್ಷಣವೇ ಪೊಲೀಸ್ ಕಂಟ್ರೋಲ್ ರೂಂ 112 ಅಥವಾ 9480802321 ಸಂಖ್ಯೆಗೆ ಕರೆ ಮಾಡಿ, ಮಾಹಿತಿ ನೀಡಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.