Brijesh Chowta: ಮಂಗಳೂರು ರೈಲ್ವೆ ಜಾಲ ನೈರುತ್ಯ ವಲಯಕ್ಕೆ ಸೇರ್ಪಡೆ.. ಅಶ್ವಿನಿ ವೈಷ್ಣವ್‌ಗೆ ಧನ್ಯವಾದ ಹೇಳಿದ ಕ್ಯಾ.ಚೌಟ
Brijesh Chowta: ಮಂಗಳೂರು ರೈಲ್ವೆ ಜಾಲ ನೈರುತ್ಯ ವಲಯಕ್ಕೆ ಸೇರ್ಪಡೆಯಾಗಿದ್ದು, ಅಶ್ವಿನಿ ವೈಷ್ಣವ್‌ಗೆ ಕ್ಯಾ.ಚೌಟ ಧನ್ಯವಾದ ಹೇಳಿದ್ದಾರೆ.
ದಕ್ಷಿಣ ಕನ್ನಡ: ಮಂಗಳೂರು ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ (South Western Railway) ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದ್ದು, ಕರಾವಳಿ ಭಾಗದ ಜನರ ದಶಕಗಳ ಬೇಡಿಕೆ ಈಡೇರಿಕೆಯಾಗಿದೆ. ಈ ಹಿನ್ನೆಲೆ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ (Brijesh Chowta), ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಸಚಿವರನ್ನು ಖುದ್ದು ಭೇಟಿಯಾದ ಸಂಸದರು, ಮಂಗಳೂರನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ಪ್ರಕ್ರಿಯೆಗೆ ಸ್ಪಂದಿಸಿದ್ದಕ್ಕಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ಪ್ರತಿಕ್ರಿಯಿಸಿದ ಸಚಿವರು, ಕರಾವಳಿ ಭಾಗದ ರೈಲ್ವೆ ಯೋಜನೆಗಳಿಗೆ ಮುಂದೆಯೂ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಸಚಿವರ ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ.ಚೌಟ ಅವರು, 'ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದ ಈ ಪ್ರಮುಖ ಆಡಳಿತಾತ್ಮಕ ಬದಲಾವಣೆಯು ಈ ಭಾಗದ ರೈಲ್ವೆ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ನಿರ್ವಹಣೆಯನ್ನು ಇನ್ನಷ್ಟು ಸಮರ್ಥಗೊಳಿಸಲಿದೆ. ಕರ್ನಾಟಕದ ರೈಲ್ವೆ ಜಾಲದೊಂದಿಗೆ, ಮಂಗಳೂರಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಿದೆ. ಈ ನಿರ್ಧಾರದಿಂದ ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿ ಹಾಗೂ ಪ್ರಯಾಣಿಕರ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ಸಿಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.