ಮಂಗಳೂರು ಗ್ರಾಮಾಂತರ: 20 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Mangaluru Rural: ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 9 ಅಂಗನವಾಡಿ ಕಾರ್ಯಕರ್ತೆ ಮತ್ತು 11 ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Nov 20, 2026 - 18:42
Nov 20, 2026 - 18:42
ಮಂಗಳೂರು ಗ್ರಾಮಾಂತರ: 20 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 9 ಅಂಗನವಾಡಿ ಕಾರ್ಯಕರ್ತೆ ಮತ್ತು 11 ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ 10ನೇ ತರಗತಿ ಉತ್ತೀರ್ಣರಾದವರನ್ನು ಪರಿಗಣಿಸಲಾಗುತ್ತದೆ. 

ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆಯಾಗಿರಬೇಕು. ಅಂತಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಕನಿಷ್ಠ 7ನೇ ತರಗತಿ ಉತ್ತೀರ್ಣರಾದವರನ್ನು ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷವಾಗಿದೆ.

ಬಬ್ಬುಕಟ್ಟೆ, ಒಂಭತ್ತುಕೆರೆ, ಮೊಂಟೆಪದವು, ಐಕುಕೊಪ್ಪಳ, ಪೆರ್ಮುದೆ, ತಾರಿಕಂಬಳ ಹಾಗೂ ಮೇಲೆಕ್ಕಾರುಪದವು ಸೇರಿದಂತೆ ವಿವಿಧ  ಅಂಗನವಾಡಿ ಹಾಗೂ ಶಿಶುಪಾಲನಾ ಕೇಂದ್ರಗಳಲ್ಲಿ ಈ ಹುದ್ದೆಗಳು ಖಾಲಿಯಿವೆ.

ಅರ್ಜಿ ಸಲ್ಲಿಸಲು ಡಿ.2 ಕಡೆ  ದಿನವಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ನಗರದ ಉರ್ವ ಮಾರ್ಕೆಟ್ ಕಟ್ಟಡದ  3ನೇ ಮಹಡಿಯಲ್ಲಿರುವ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.