ಮಂಗಳೂರು: ಗ್ರಾಮ ಆಡಳಿತಾಧಿಕಾರಿ ನೇಮಕಾತಿ, ಡಿ.8 ರಂದು ಮೂಲ ದಾಖಲೆಗಳ ಪರಿಶೀಲನೆ
Mangaluru: ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಡಿ, ದಕ್ಷಿಣ ಕನ್ನಡ ಜಿಲ್ಲಾ ಕಂದಾಯ ಘಟಕದ 20 ಹುದ್ದೆಗಳ ನೇರ-ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಮಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಡಿ, ದಕ್ಷಿಣ ಕನ್ನಡ ಜಿಲ್ಲಾ ಕಂದಾಯ ಘಟಕದ 20 ಹುದ್ದೆಗಳ ನೇರ-ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ, ಮೆರಿಟ್ ಪಟ್ಟಿ ಅನುಸಾರ 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ, ದಕ್ಷಿಣ ಕನ್ನಡ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್ www.dk.nic.inನಲ್ಲಿ ಪ್ರಕಟಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯು ಡಿ.8 ರಂದು ಬೆಳಿಗ್ಗೆ 10 ಗಂಟೆಯಿಂದ ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಲಿದೆ. ಪಟ್ಟಿಯಲ್ಲಿ ಹೆಸರಿರುವ ಎಲ್ಲಾ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿಯ ಪ್ರಜಾ ಸೌಧದಲ್ಲಿರುವ ಕೊಠಡಿ ಸಂಖ್ಯೆ 108ರ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.