ಮಂಗಳೂರು: ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಕಾರ್ಯಾಗಾರ

Mangaluru: ಮಂಗಳೂರು ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಸರ್ಕಾರಿ ಸಿ ವೃಂದದ ನೌಕರರು ಮತ್ತು ಅಧಿಕಾರಿಗಳಿಗೆ ಎರಡು ದಿನಗಳ ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ಪರಿಚಯಾತ್ಮಕ ತರಬೇತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

Nov 21, 2026 - 19:44
ಮಂಗಳೂರು: ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಕಾರ್ಯಾಗಾರ

ಮಂಗಳೂರು: ಸಮುದ್ರ ಮೀನುಗಾರಿಕೆ, ಮೀನು ಸಂಸ್ಕರಣೆ, ಮೀನು ಸಾಗಾಣಿಕೆ ಮತ್ತು ಮಾರಾಟ ಚಟುವಟಿಕೆಗಳು ಸ್ಥಳೀಯ ಆರ್ಥಿಕತೆಯನ್ನು ಬಲಪಡಿಸುತ್ತವೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಸುಸ್ಥಿರ ಅಭಿವೃದ್ಧಿ ಕೋಶದ ವಿಶೇಷ ಅಧಿಕಾರಿ ಅನಿಲ ಕುಮಾರ ಶೆಟ್ಟಿ ಹೇಳಿದರು.

ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆದ ಜಿಲ್ಲೆಯ ಸರ್ಕಾರಿ ಸಿ ವೃಂದದ ನೌಕರರು ಮತ್ತು ಅಧಿಕಾರಿಗಳಿಗೆ ಎರಡು ದಿನಗಳ ಸುಸ್ಥಿರ ಅಭಿವೃದ್ಧಿ ಗುರಿಗಳ ಕುರಿತು ಪರಿಚಯಾತ್ಮಕ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಬಂದರುಗಳು, ಪ್ರವಾಸೋದ್ಯಮ, ದೋಣಿ ನಿರ್ಮಾಣ ಮತ್ತು ಸಮುದ್ರ ವ್ಯಾಪಾರವೂ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ. ಸಮುದ್ರ ಸಂಪನ್ಮೂಲಗಳ ಸುಸ್ಥಿರ ಬಳಕೆ, ಪರಿಸರ ಸಂರಕ್ಷಣೆ ಮತ್ತು ಆಧುನಿಕ ಮೀನುಗಾರಿಕೆ ತಂತ್ರಜ್ಞಾನಗಳ ಅಳವಡಿಕೆಯಿಂದ ಕರಾವಳಿ ಪ್ರದೇಶಗಳ ಆರ್ಥಿಕ ಅಭಿವೃದ್ಧಿ ಮತ್ತಷ್ಟು ವೃದ್ಧಿಯಾಗುತ್ತಿದೆ. ಹೀಗಾಗಿ ಕಡಲ ತೀರ ಪ್ರದೇಶಗಳು ರಾಜ್ಯದ ಸಮೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತವೆ ಎಂದು ಅವರು ತಿಳಿಸಿದರು. 

ತರಬೇತಿ ಸಂಸ್ಥೆಯ ಪ್ರಾಚಾರ್ಯೆ ಜಾನಕಿ ವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕದ ಕರಾವಳಿ ಮಂಗಳೂರು ಪ್ರಮುಖ ವಾಣಿಜ್ಯ, ಶಿಕ್ಷಣ ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿದೆ. ಅರಬ್ಬೀ ಸಮುದ್ರ ತೀರದಲ್ಲಿರುವ ಈ ನಗರವು ಬೀಚ್ ಮತ್ತು ಪಿಲಿಕುಳ ನಿಸರ್ಗಧಾಮದಂತಹ ಸುಂದರ ಪ್ರವಾಸಿ ತಾಣಗಳಿಗೆ ಪ್ರಸಿದ್ಧವಾಗಿದೆ. ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ ಹಾಗೂ ರೊಸಾರಿಯೊ ಕ್ಯಾಥೆಡ್ರಲ್ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿವೆ ಎಂದು ಹೇಳಿದರು.

ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳು ಕೇಂದ್ರದ ಬೋಧಕ ಡಾ.ಸಿದ್ದರಾಮ. ಹೆಚ್.ಎಂ ಮಾತನಾಡಿ,  ತುಳು ಭಾಷೆಯ ಸಾಹಿತ್ಯವು ಶ್ರೀ ಭಾಗವತೋ, ಪದ್ದಣ ಹಾಗೂ ಜನಪದ ಕಾವ್ಯಗಳ ಮೂಲಕ ಸಮೃದ್ಧವಾಗಿದೆ ಎಂದು ತಿಳಿಸಿದರು. 

ಜಿಲ್ಲಾ ತರಬೇತಿ ಸಂಸ್ಥೆಯ ಬೋಧಕರು, ಅಧಿಕಾರಿ-ಸಿಬ್ಬಂದಿಯವರು ಮತ್ತು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ಅಧಿಕಾರ ವ್ಯಾಪ್ತಿಯ ವಿವಿಧ ಇಲಾಖೆಗಳ 28 ಜನ ಸಿ ವೃಂದದ ನೌಕರು ಮತ್ತು ಸಿಬ್ಬಂದಿಗಳು ಸುಸ್ಥಿರ ಅಭಿವೃದ್ಧಿ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದರು. ಬೋಧಕಿ ಯಶೋಧ ಬಿ. ಹೆಚ್ ತರಬೇತಿಯನ್ನು ಸಂಯೋಜಿಸಿದ್ದರು.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.