ಮಣಿಕರ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
Manikara: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ 'ಸ್ವಾತಂತ್ರ್ಯೋತ್ಸವ'ವನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.
ಪುತ್ತೂರು: ಮಣಿಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ 'ಸ್ವಾತಂತ್ರ್ಯೋತ್ಸವ'ವನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಮಹಮ್ಮದ್ ಶರೀಫ್ ಧ್ವಜಾರೋಹಣ ನೆರವೇರಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

ಆ ಬಳಿಕ ವಿದ್ಯಾರ್ಥಿಗಳಿಂದ ದೇಶಪ್ರೇಮ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಎಲ್ಲರಿಗೂ ಸಿಹಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗನ್ನಾಥ ರೈ, ಎಸ್‌ಡಿಎಂಸಿ ಉಪಾಧ್ಯಕ್ಷ ಮೋನಪ್ಪ, ಸರ್ವ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರುಗಳು, ಅಂಗನವಾಡಿ ಮಕ್ಕಳು, ಶಿಕ್ಷಕಿಯರು, ಊರಿನ ಗಣ್ಯರು, ಶಾಲಾ ಪೋಷಕ ವೃಂದ ಹಾಗೂ ಗ್ರಾಮ ಪಂಚಾಯತಿ ಮಾಜಿ ಸದಸ್ಯರುಗಳು ಉಪಸ್ಥಿತರಿದ್ದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.