ಮಂತ್ರಾಲಯ: ಸುಬುಧೇಂದ್ರ ತೀರ್ಥ ಸ್ವಾಮೀಜಿಗಳ 14ನೇ ಚಾತುರ್ಮಾಸ್ಯ ದೀಕ್ಷೆ ಆರಂಭ
Mantralaya: ಪ್ರಸಿದ್ಧ ಪುಣ್ಯಕ್ಷೇತ್ರ 'ರಾಘವೇಂದ್ರ ಸ್ವಾಮಿ' ಮಠದ ಪೀಠಾಧಿಪತಿಗಳಾದ ಸುಬುಧೇಂದ್ರ ತೀರ್ಥ ಸ್ವಾಮೀಜಿ, ತಮ್ಮ 14ನೇ ಚಾತುರ್ಮಾಸ್ಯ ದೀಕ್ಷೆಯನ್ನು ಭಕ್ತಿಪೂರ್ವಕವಾಗಿ ಆರಂಭಿಸಿದರು.
ಮಂತ್ರಾಲಯ: ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ 'ರಾಘವೇಂದ್ರ ಸ್ವಾಮಿ' ಮಠದ ಪೀಠಾಧಿಪತಿಗಳಾದ ಸುಬುಧೇಂದ್ರ ತೀರ್ಥ ಸ್ವಾಮೀಜಿ, ಇಂದು ತಮ್ಮ 14ನೇ ಚಾತುರ್ಮಾಸ್ಯ ದೀಕ್ಷೆಯನ್ನು ಭಕ್ತಿಪೂರ್ವಕವಾಗಿ ಆರಂಭಿಸಿದರು.
ಅವರು ಸಾಂಪ್ರದಾಯಿಕ ಚಾತುರ್ಮಾಸ್ಯ ದೀಕ್ಷೆಯ ವಿಧಿ-ವಿಧಾನಗಳನ್ನು ನೆರವೇರಿಸಿ, ರಾಘವೇಂದ್ರ ಸ್ವಾಮಿ, ವಾದೀಂದ್ರ ತೀರ್ಥರು ಹಾಗೂ ಮಠದಲ್ಲಿರುವ ಎಲ್ಲಾ ಬೃಂದಾವನಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.
ಚಾತುರ್ಮಾಸ್ಯದ ಅಂಗವಾಗಿ ಮಂತ್ರಾಲಯದ ಶ್ರೀಮಠದಲ್ಲಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಮೂಲಕ ಭಕ್ತರಲ್ಲಿ ಧಾರ್ಮಿಕ ಭಾವನೆ, ಆಧ್ಯಾತ್ಮಿಕ ಚಿಂತನೆ ಮತ್ತು ಸೇವಾ ಮನೋಭಾವವನ್ನು ಪ್ರೇರಿಪಿಸಲಾಗುತ್ತದೆ.
ಈ ವೇಳೆ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ಭಕ್ತರನ್ನು ಉದ್ದೇಶಿಸಿ, ಅನುಗ್ರಹ ಸಂದೇಶ ನೀಡಿದರು. ಭಕ್ತರಿಗೆ ಆಶೀರ್ವಚನ ನೀಡಿ, ಚಾತುರ್ಮಾಸ್ಯದ ಮಹತ್ವ ಹಾಗೂ ಆಧ್ಯಾತ್ಮಿಕ ಆಚರಣೆಗಳ ಕುರಿತು ಸಂದೇಶ ನೀಡಿದರು.
ಚಾತುರ್ಮಾಸ್ಯ ದೀಕ್ಷೆ ಹಿನ್ನೆಲೆ, ಮಂತ್ರಾಲಯಕ್ಕೆ ಆಗಮಿಸಿದ ಭಕ್ತರು ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.