ಮಂತ್ರಾಲಯ ಬಳಿ ಭೀಕರ ಅಪಘಾತ: ಮಂಗಳೂರಿನ ರವಿಚಂದ್ರ ಶೆಟ್ಟಿ ಸಾವು

Mantralaya Near Accident: ಮಂತ್ರಾಲಯದ ಸಮೀಪ ಇಂದು (ಮಂಗಳವಾರ) ಬೆಳಗ್ಗೆ 2 ಸುಮಾರಿಗೆ ಭೀಕರ ಕಾರು ಅಪಘಾತವಾಗಿದೆ. ಮಂಗಳೂರಿನ ರವಿಚಂದ್ರ ಶೆಟ್ಟಿ ಸಾವನ್ನಪ್ಪಿದ್ದಾರೆ.

Jul 21, 2026 - 13:33
Jul 21, 2026 - 13:33
ಮಂತ್ರಾಲಯ ಬಳಿ ಭೀಕರ ಅಪಘಾತ: ಮಂಗಳೂರಿನ ರವಿಚಂದ್ರ ಶೆಟ್ಟಿ ಸಾವು

ರಾಯಚೂರು: ಮಂತ್ರಾಲಯದ ಸಮೀಪ ಇಂದು (ಮಂಗಳವಾರ) ಬೆಳಗ್ಗೆ 2 ಸುಮಾರಿಗೆ ಭೀಕರ ಕಾರು ಅಪಘಾತವಾಗಿದೆ. ಮಂಗಳೂರು ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ರವಿಚಂದ್ರ ಶೆಟ್ಟಿ (45) ಸ್ಥಳದಲ್ಲೇ ಅಸುನೀಗಿದ್ದಾರೆ. 

ಪಟ್ಲ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಲೆಕ್ಕ ಪರಿಶೋಧಕ ಸುದೇಶ್ ರೈ ಹಾಗೂ ಪ್ರದೀಪ್ ಆಳ್ವ ಕದ್ರಿ ಅವರಿಗೆ ತೀವ್ರತರದ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಿರುಪತಿಯಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ, ರಾಷ್ಟ್ರೀಯ ಹೆದ್ದಾರಿ-40ರಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ  ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.